ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಬೊಮ್ಮಾಯಿ ಅವರೇ, ರೌಡಿರಾಜ್ಯ ಕಟ್ಟಲು ಹೊರಟಿದ್ದೀರಾ: ಕಾಂಗ್ರೆಸ್ ಪ್ರಶ್ನೆ

Last Updated 3 ಡಿಸೆಂಬರ್ 2022, 9:08 IST
ಅಕ್ಷರ ಗಾತ್ರ

ಬೆಂಗಳೂರು: ಬಿಜೆಪಿ ನಾಯಕರು ರೌಡಿ ಶೀಟರ್‌ಗಳೊಂದಿಗೆ ಕಾಣಿಸಿಕೊಂಡಿರುವುದನ್ನು ಕಾಂಗ್ರೆಸ್‌ ತೀವ್ರವಾಗಿ ಖಂಡಿಸಿದೆ.

ಸೈಲೆಂಟ್ ಸುನಿಲ್, ಫೈಟರ್ ರವಿ ಹಾಗೂ ಬೆತ್ತನಗೆರೆ ಶಂಕರ ಬಿಜೆಪಿ ಸೇರ್ಪಡೆ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ.

‘ರೌಡಿಗಳನ್ನು ಬಿಜೆಪಿ ಸೇರಿಸಿಕೊಳ್ಳುವುದಿಲ್ಲ ಎನ್ನುತ್ತಿರುವ ಬಿಜೆಪಿ ನಾಯಕರು ಮತ್ತೊಂದೆಡೆ ರೌಡಿಗಳ ಪಕ್ಷ ಸೇರ್ಪಡೆ ಅಭಿಯಾನವನ್ನೇ ನಡೆಸುತ್ತಿದೆ. ಸಂಸದ ಪ್ರತಾಪ ಸಿಂಹ ಅವರು ಬೆತ್ತನಗೆರೆ ಶಂಕರ ಎಂಬ ರೌಡಿ ಶೀಟರ್‌ನನ್ನು ಪಕ್ಷದ ಬಾವುಟ ನೀಡಿ ಬರಮಾಡಿಕೊಂಡಿರುವುದು ಇದಕ್ಕೆ ಸಾಕ್ಷಿ’ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ, ರೌಡಿರಾಜ್ಯ ಕಟ್ಟಲು ಹೊರಟಿದ್ದೀರಾ? ಇದೇನಾ ನಿಮ್ಮ ಸಂಸ್ಕೃತಿ’ ಎಂದು ಕಾಂಗ್ರೆಸ್ ಗುಡುಗಿದೆ.

‘ಸಿಎಂ ಬೊಮ್ಮಾಯಿಯವರು ದಮ್ಮು, ತಾಕತ್ತು ಇದ್ರೆ ಬನ್ನಿ ಎಂದು ರೌಡಿಸಂ ಭಾಷೆಯಲ್ಲಿ ಸವಾಲು ಹಾಕಿದ್ದರ ಹಿಂದೆ ನೈಜ ರೌಡಿಸಂ ಇದೆ ಎಂದು ಈಗ ಬೆಳಕಿಗೆ ಬರುತ್ತಿದೆ. ಬೊಮ್ಮಾಯಿ ಅವರೇ, ರೌಡಿ ಮೋರ್ಚಾ ಕಟ್ಟಿಕೊಂಡು ಈ ಸವಾಲು ಹಾಕಿದೀರಾ? ಬಿಜೆಪಿ ಕಚೇರಿ ಈಗ ರೌಡಿಗಳ ಅಡ್ಡೆಯಾಗಿದೆ, ಬೊಮ್ಮಾಯಿಯವರು ರೌಡಿಗಳಿಗೆ ಮಹಾಗುರುವಿನಂತೆ ಆಗಿದ್ದಾರೆ’ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT