ಗುರುವಾರ , ಮೇ 13, 2021
18 °C

ವೈದ್ಯಕೀಯ ಮೂಲಸೌಕರ್ಯ ಕ್ಷೇತ್ರಕ್ಕೆ ಕಾಂಗ್ರೆಸ್ ಕೊಡುಗೆ ಶೂನ್ಯ: ಬಿಜೆಪಿ ಟೀಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ದೇಶದಲ್ಲಿ ವೈದ್ಯಕೀಯ ಮೂಲಸೌಕರ್ಯ ಕ್ಷೇತ್ರಕ್ಕೆ ಕಾಂಗ್ರೆಸ್ ಕೊಡುಗೆ ಶೂನ್ಯ’ ಎಂದು ಬಿಜೆಪಿ ಟೀಕಿಸಿದೆ.

ಈ ವಿಚಾರವಾಗಿ ಸರಣಿ ಟ್ವೀಟ್‌ ಮಾಡಿರುವ ಬಿಜೆಪಿ, ‘ದೇಶದಲ್ಲಿರುವ ಒಟ್ಟು ಏಮ್ಸ್‌ಗಳಲ್ಲಿ ಕಾಂಗ್ರೆಸ್ ಘೋಷಿಸಿದ್ದು‌ ಬರೇ ಎರಡೇ ಎರಡು!, ಮೋದಿ ಸರ್ಕಾರ ಕೇವಲ 7 ವರ್ಷಗಳಲ್ಲಿ 11 ಏಮ್ಸ್‌ ನಿರ್ಮಿಸಿದೆ ಮತ್ತು 3 ಪ್ರಗತಿಯಲ್ಲಿದೆ. ಫೇಕ್‌ ನ್ಯೂಸ್‌ ಫ್ಯಾಕ್ಟರಿ ಕಾಂಗ್ರೆಸ್‌ ಮಾತ್ರ ಎಲ್ಲವನ್ನೂ ನಾವೇ ಮಾಡಿದ್ದು ಎಂದು ಹೇಳುತ್ತಿದೆ’ ಎಂದು ಟೀಕಿಸಿದೆ.

‘ಕಾರ್ಖಾನೆಗಳು ಬಳಸುವ ಆಮ್ಲಜನಕದ ರಫ್ತಿನಲ್ಲಿ ಏರಿಕೆ ಕಂಡಿದೆ. ಇದನ್ನು ತಿರುಚಿರುವ ಕಾಂಗ್ರೆಸ್‌ ಪಕ್ಷದ ನಾಯಕರು, ಭಾರತ ವೈದ್ಯಕೀಯ ಆಮ್ಲಜನಕ ರಫ್ತು ಮಾಡುತ್ತಿದೆ ಎಂದು ಸುಳ್ಳು ಸುದ್ದಿ ಹಬ್ಬಿಸಿದರು. ಕಾಂಗ್ರೆಸ್‌ ನಾಯಕರು ಸುಳ್ಳು ಸುದ್ದಿಯ ಮೂಲಕ ಜನರಲ್ಲಿ ಭೀತಿ ಮೂಡಿಸುತ್ತಿದ್ದಾರೆ’ ಎಂದು ಬಿಜೆಪಿ ಮತ್ತೊಂದು ಟ್ವೀಟ್‌ ಮಾಡಿದೆ.

‘ಕೋವಿಡ್‌ ಸಾಂಕ್ರಾಮಿಕವನ್ನು ಕಾಂಗ್ರೆಸ್‌ ಹೇಗೆ ರಾಜಕೀಯಕ್ಕಾಗಿ ಬಳಸಿಕೊಳ್ಳುತ್ತಿದೆ ಎಂಬುದಕ್ಕೆ ವಯನಾಡಿನ ಸಂಸದ ರಾಹುಲ್‌ ಗಾಂಧಿ ಅವರೇ ಸಾಕ್ಷಿ. ನಿರ್ಧರಿತವಾಗದ ಪ್ರಚಾರ ಸಭೆಯನ್ನೇ ರದ್ದು ಮಾಡಿದ ಖ್ಯಾತಿ ಯುವರಾಜನಿಗೆ ಸಲ್ಲುತ್ತದೆ. ರಾಜಕೀಯ ಲಾಭಕ್ಕಾಗಿ ಏನು ಬೇಕಾದರೂ ಮಾಡಬಲ್ಲರು’ ಎಂದು ಕಾಂಗ್ರೆಸ್‌ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

ಇದನ್ನೂ ಓದಿ... Covid-19 India Updates: 3.14 ಲಕ್ಷ ಹೊಸ ಪ್ರಕರಣ, 2,104 ಮಂದಿ ಸಾವು

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು