ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೂನಿಯರ್ ಖರ್ಗೆಗೆ ತಮ್ಮ ಮನೆಯ ಹೆಂಚು ತೂತು ಎಂಬುದೇ ಗೊತ್ತಿಲ್ಲ: ಬಿಜೆಪಿ ವ್ಯಂಗ್ಯ

Last Updated 13 ಆಗಸ್ಟ್ 2022, 8:33 IST
ಅಕ್ಷರ ಗಾತ್ರ

ಬೆಂಗಳೂರು: ಕೆಪಿಸಿಸಿ ವಕ್ತಾರ, ಶಾಸಕ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಬಿಜೆಪಿ ತೀವ್ರ ವಾಗ್ದಾಳಿ ನಡೆಸಿದೆ.

‘ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಉದ್ಯೋಗ ಪಡೆಯಲು ಯುವತಿಯರು ಮಂಚ ಹತ್ತಬೇಕು ಮತ್ತು ಯುವಕರು ಲಂಚ
ನೀಡಬೇಕು’ ಎಂಬ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಬಿಜೆಪಿ ಟ್ವಿಟರ್‌ನಲ್ಲಿ ಆಕ್ಷೇಪ ವ್ಯಕ್ತಪಡಿಸಿದೆ.

‘ಸಾವಿರಾರು ಮಹಿಳೆಯರು, ಪ್ರತಿಭಾವಂತರು, ವಿದ್ಯಾವಂತರು ಕಷ್ಟಪಟ್ಟು, ಅನೇಕ ಪರೀಕ್ಷೆಗಳನ್ನು ಉತ್ತೀರ್ಣರಾಗಿ, ಕೆಲಸ ಗಿಟ್ಟಿಸಿಕೊಳ್ಳುತ್ತಾರೆ. ಪ್ರಿಯಾಂಕ ಖರ್ಗೆ ಅವರೇ ನಿಮ್ಮ ಈ ಮಾತುಗಳು, ಅಷ್ಟು ಜನ ಮಹಿಳೆಯರಿಗೆ ಅವಮಾನ ಮಾಡಿದಂತಲ್ಲವೇ? ಕೂಡಲೇ ಕ್ಷಮೆಯಾಚಿಸಿ’ ಎಂದು ಬಿಜೆಪಿ ಆಗ್ರಹಿಸಿದೆ.

‘ಲಂಚ- ಮಂಚದ ಸರ್ಕಾರ ಎಂದು ಆರೋಪ ಮಾಡಿದ್ದ ಮಾಜಿ ಸಚಿವ ಪ್ರಿಯಾಂಕ್‌ ಖರ್ಗೆಯವರಿಗೆ ‘ತಮ್ಮ ಮನೆಯ ಹೆಂಚು ತೂತು’ ಎಂಬುದೇ ಗೊತ್ತಿಲ್ಲ. ಇವರು‌ ಆರೋಪ ಮಾಡಿದ ಬೆನ್ನಲ್ಲೆ ಜಯಮಾಲಾ ಅವರ ಲಂಚದ ಹಗರಣ ಬಯಲಾಗಿದೆ. ಹಾಗಾದರೆ ಲಂಚದ ಸರ್ಕಾರ ಯಾರದ್ದು’ ಎಂದು ಬಿಜೆಪಿ ಟೀಕಿಸಿದೆ.

‘ಕಾಂಗ್ರೆಸ್ ನಾಯಕರ ರಾತ್ರಿ ಬದುಕಿನ ರಂಗ-ಬಿರಂಗಿ ಬಗ್ಗೆ ಸಾಕಷ್ಟು ದಂತಕತೆಗಳು ಮಾತ್ರವಲ್ಲ, ಗುಪ್ತ ಸಿಡಿಗಳೂ ಇವೆ. ಜೂನಿಯರ್ ಖರ್ಗೆ ಅವರೇ, ಸಭ್ಯಸ್ಥರ ಮುಖವಾಡ ಹಾಕಿ ಸಮಾಜದ ಕಣ್ಣಿಗೆ ಗಣ್ಯರೆಂದು ಬಿಂಬಿಸಿಕೊಂಡ ಕಾಂಗ್ರೆಸ್ ಗೋಮುಖ ವ್ಯಾಘ್ರಗಳ ಪಟ್ಟಿ ನೀಡಿದರೆ ಸಮರ್ಥನೆ ಮಾಡಿಕೊಳ್ಳುವುದಕ್ಕೂ ನಿಮಗೆ ಕಷ್ಟವಾಗಬಹುದು’ ಬಿಜೆಪಿ ವಾಗ್ದಾಳಿ ನಡೆಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT