ಭಾನುವಾರ, ಮೇ 22, 2022
24 °C

ಬಿಜೆಪಿಯವರಿಗೆ ಕೋಮು ದ್ವೇಷ ಸೃಷ್ಟಿಸಿ ಮತ್ತೆ ಅಧಿಕಾರಕ್ಕೇರುವ ಭ್ರಮೆ ಇದೆ: ಡಿಕೆಶಿ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಜೆಪಿಯವರು ರಾಜ್ಯದಲ್ಲಿ ಕೋಮು ದ್ವೇಷ ಸೃಷ್ಟಿಸಿ ಮತ್ತೆ ಅಧಿಕಾರಕ್ಕೆ ಬರುವ ಭ್ರಮೆಯಲ್ಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. 

ಈ ಕುರಿತು ಡಿ.ಕೆ.ಶಿವಕುಮಾರ್‌ ಮಾತನಾಡಿರುವ ವಿಡಿಯೊವನ್ನು ಕಾಂಗ್ರೆಸ್‌ ತನ್ನ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದೆ. 

‘ಮಾವು ಮಾರಾಟ ವಿವಾದ ಬಿಜೆಪಿಯ ರಾಜಕೀಯ ಅಜೆಂಡಾವಾಗಿದೆ. ಬಿಜೆಪಿ ರೈತರ ಬದುಕಿಗೆ ಸಮಾಧಿ ಕಟ್ಟಲು ಹೊರಟಿದೆ’ ಎಂದು ಡಿಕೆಶಿ ವಾಗ್ದಾಳಿ ನಡೆಸಿದ್ದಾರೆ. 

ಈ ವಿವಾದದಿಂದ ರೈತರಿಗೆ ನಷ್ಟವಾದರೆ ಸರ್ಕಾರ ಭರಿಸುತ್ತದೆಯೇ? ಬಿಜೆಪಿ ಮತ ಧ್ರುವೀಕರಣಕ್ಕಾಗಿ ಈ ರೀತಿ ಮಾಡುತ್ತಿದೆ. ಬಿಜೆಪಿಯವರು ಜನರನ್ನು ದಿಕ್ಕು ತಪ್ಪಿಸಿ, ಕೋಮು ದ್ವೇಷ ಸೃಷ್ಟಿಸಿ ಮತ್ತೆ ಅಧಿಕಾರಕ್ಕೆ ಬರುವ ಭ್ರಮೆಯಲ್ಲಿದ್ದಾರೆ ಎಂದು ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಹಿಜಾಬ್, ಹಲಾಲ್‌ –ಜಟ್ಕಾ, ಆಜಾನ್ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಮಾವು ಮಾರಾಟ ಕುರಿತಾದ ಚರ್ಚೆ ಮುನ್ನೆಲೆಗೆ ಬಂದಿದೆ. ಇದೇ ವಿಚಾರವಾಗಿ ಕಾಂಗ್ರೆಸ್‌, ಬಿಜೆಪಿ ಹಾಗೂ ಜೆಡಿಎಸ್‌ ಮಧ್ಯೆ ಪರಸ್ಪರ ಕೆಸರೆರಚಾಟ ಜೋರಾಗಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು