ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿದ್ದರಾಮಯ್ಯ ಜೊತೆಗೂಡಿ ಮತ್ತೆ ಹೋರಾಟಕ್ಕೆ ಮರಳಿದ್ದೇನೆ: ಡಾ.ಎಚ್‌.ಸಿ. ಮಹದೇವಪ್ಪ

Last Updated 11 ಫೆಬ್ರುವರಿ 2021, 5:30 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಜಾಪ್ರಭುತ್ವಕ್ಕೆ ಧಕ್ಕೆ ಆದಾಗ ಹೋರಾಟ ಸೃಷ್ಟಿಯಾಗುತ್ತೆ. ಅಂತಹ ಚಳವಳಿಗಳಿಗೆ ನಾವು ಬೆಂಬಲ ನೀಡುತ್ತೇವೆ. ಆದರೆ, ಅಹಿಂದ ವೇದಿಕೆಯನ್ನು ನಾವೇ ಸೃಷ್ಟಿ ಮಾಡುವುದಿಲ್ಲ ಎಂದು ಮಾಜಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಹೇಳಿದ್ದಾರೆ.

ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮಾಜಿ ಸಚಿವ ಡಾ. ಎಚ್‌.ಸಿ. ಮಹದೇವಪ್ಪ ನಿವಾಸಕ್ಕೆ ಬುಧವಾರ ಭೇಟಿ ನೀಡಿ, ಮಾತುಕತೆ ನಡೆಸಿದರು.

ಈ ಕುರಿತು ಫೇಸ್‌ಬುಕ್‌ನಲ್ಲಿ ಪ್ರತಿಕ್ರಿಯಿಸಿರುವ ಮಹದೇವಪ್ಪ, ‘ನಾನು ಮತ್ತು ಸಿದ್ದರಾಮಯ್ಯ 1989 ರಿಂದಲೂ ಆತ್ಮೀಯರು. ನಮ್ಮಿಬ್ಬರ ನಡುವೆ ಭಿನ್ನಾಭಿಪ್ರಾಯ ಕೇವಲ ಅಂತೆಕಂತೆ ಅಷ್ಟೇ. ಪ್ರಜಾಪ್ರಭುತ್ವಕ್ಕೆ ಅಪಾಯದ ಸಮಯ ಬಂದಾಗಲೆಲ್ಲಾ ನಾವು ಹೋರಾಟ ಮಾಡಿದ್ದೇವೆ’ ಎಂದು ಹೇಳಿದ್ದಾರೆ.

‘ಪ್ರಜಾಪ್ರಭುತ್ವಕ್ಕೆ ಧಕ್ಕೆ ಆದಾಗ ಹೋರಾಟ ಸೃಷ್ಟಿಯಾಗುತ್ತೆ. ಅಂತಹ ಚಳವಳಿಗಳಿಗೆ ನಾವು ಬೆಂಬಲ ನೀಡುತ್ತೇವೆ. ಆದರೆ ಅಹಿಂದ ವೇದಿಕೆಯನ್ನು ನಾವೇ ಸೃಷ್ಟಿ ಮಾಡುವುದಿಲ್ಲ’ ಎಂದಿದ್ದಾರೆ.

‘ಇದೀಗ ದೇಶದಲ್ಲಿ ಸಂವಿಧಾನಾತ್ಮಕ ವಾತಾವರಣವೇ ಕೆಡುತ್ತಿರುವುದರಿಂದ, ಜನಪರವಾದ ದನಿಗಳೇ ರಾಜಕೀಯ ವಲಯದಲ್ಲಿ ಕ್ಷೀಣಿಸುತ್ತಿರುವುದರಿಂದ ನಾನು ಮತ್ತು ಸಿದ್ದರಾಮಯ್ಯನವರು ಹೋರಾಟಗಳನ್ನು ಸಂಘಟಿಸುವ ಮತ್ತು ಸಾಮಾಜಿಕ ನ್ಯಾಯದ ಕನಸನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ಶ್ರಮಿಸಲು ನಿರ್ಧರಿಸಿದ್ದೇವೆ’ ಎಂದು ಬರೆದುಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT