ಶುಕ್ರವಾರ, ಏಪ್ರಿಲ್ 23, 2021
30 °C

ಜೆಡಿಎಸ್ ಪಕ್ಷದಲ್ಲಿ ಶಕ್ತಿ ಇದೆ, ನಾಯಕರಲ್ಲಿ ಏಕತೆ ಇಲ್ಲ: ಎಚ್.ಡಿ.ದೇವೇಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಜೆಡಿಎಸ್ ಪಕ್ಷಕ್ಕೆ ರಾಜ್ಯದಲ್ಲಿ ಶಕ್ತಿ ಇದೆ. ಆದರೆ, ಪಕ್ಷದ‌ ಮುಖಂಡರಲ್ಲಿ ಏಕತೆಯ ಕೊರತೆ ಇದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಹೇಳಿದರು.

ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಪಕ್ಷದ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ‘ಒಗ್ಗಟ್ಟಿನಿಂದ ಹೋರಾಡಿದರೆ ಪಕ್ಷಕ್ಕೆ ಬಲ‌ ಬರಲಿದೆ. ಮುಂಬರುವ ತಾಲ್ಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆಯ ಟಿಕೆಟ್ ಹಂಚಿಕೆಯಲ್ಲಿ ವ್ಯತ್ಯಾಸಗಳು ಆದರೆ ಹೊಂದಾಣಿಕೆ ಮಾಡಿಕೊಂಡು ಹೋಗಬೇಕು. ಎಲ್ಲರೂ ಏಕತೆಯನ್ನು ಪ್ರದರ್ಶಿಸಬೇಕು’ ಎಂದರು.

ಈ ಪಕ್ಷ ಉಳಿಯುವುದೇ ಇಲ್ಲ ಎಂದು ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕೆಲವರು ಹೇಳಿದ್ದರು. ಆದರೆ, ಪಕ್ಷದ ಶಕ್ತಿ ಕುಂದಿಲ್ಲ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲೂ ಅದು ಸಾಬೀತಾಗಿದೆ. ‌ಪಕ್ಷಕ್ಕೆ‌ ನಿಷ್ಠರಾಗಿರುವ ಮುಖಂಡರು ಜೆಡಿಎಸ್ ನಲ್ಲಿ ಇನ್ನೂ ಇದ್ದಾರೆ ಎಂದು ಹೇಳಿದರು.

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಜೆಡಿಎಸ್ ಮೊದಲ‌ ಸ್ಥಾನ ಪಡೆಯಬೇಕು. ‌ಶೀಘ್ರದಲ್ಲೇ ಪಕ್ಷದ ತಾಲ್ಲೂಕು ಮತ್ತು ಜಿಲ್ಲಾ ಘಟಕಗಳನ್ನು ಪುನರ್ ರಚಿಸಲಾಗುವುದು ಎಂದರು.

ಇವನ್ನೂ ಓದಿ...

ಜೆಡಿಎಸ್ ಸಮಾವೇಶ: ಅರ್ಧದಲ್ಲೇ ನಾಡಗೀತೆ ಮೊಟಕು

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಹಿಂದಿ ಹೇರಿದರೆ ರಕ್ತಪಾತ: ಸಿದ್ದರಾಮಯ್ಯ

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು