ಪ್ರವಾಸೋದ್ಯಮ ಸಚಿವ ಸಿ.ಟಿ. ರವಿಯವರು ಅಧಿಕಾರದ ಮದದ ಮತ್ತಿನಲ್ಲಿ ತೇಲುತ್ತಿದ್ದಾರೆ. ಹೀಗಾಗಿ ಅವರು ಮೊದಲು ತುರ್ತಾಗಿ ಪರೀಕ್ಷೆಗೆ ಒಳಗಾಗುವುದು ಒಳಿತು. ನಾನು ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ ಸಮಚಿತ್ತದಲ್ಲಿ ಇರುತ್ತೇನೆ. ಅಧಿಕಾರದ ಅಮಲು ಕೆಲವರಿಗೆ ಮಾತ್ರ ತೆವಲು. 1/8
ನಾನು ಮುಖ್ಯಮಂತ್ರಿ ಆಗಿದ್ದಾಗ ಕ್ರಿಕೆಟ್ ಬೆಟ್ಟಿಂಗ್, ಮಾದಕ ದ್ರವ್ಯ, ಮೀಟರ್ ಬಡ್ಡಿ ಹತ್ತಿಕ್ಕಲು ವಿಶೇಷ ತಂಡ ರಚಿಸಿದ್ದೆ. ಇದರಿಂದ ಕನಲಿ ಹೋಗಿದ್ದ ದಂಧೆಕೋರರು ಶ್ರೀಲಂಕಾ ಹಾಗೂ ಮುಂಬೈಗೆ ಹಾರಿ ಹೋಗಿದ್ದರು. ಆಮೇಲೆ ಶಾಸಕರನ್ನು ಮುಂಬೈಗೆ ಕರೆದೊಯ್ಯುವಾಗ ಶಾಸಕರ ಜೊತೆ ಕಂಪನಿ ಕೊಟ್ಟಿದ್ದರು. 2/8
ಶಾಸಕರನ್ನು ಖರೀದಿ ಮಾಡಿ, ಕ್ರಿಕೆಟ್ ಬೆಟ್ಟಿಂಗ್, ಡ್ರಗ್ ಮಾಫಿಯಾದ ಪಾಪದ ಹಣವನ್ನು ಚೆಲ್ಲಿ ಸರ್ಕಾರ ಉಳಿಸಿಕೊಳ್ಳುವ ವ್ಯಕ್ತಿ ನಾನಲ್ಲ. ಅಂತಹ ಕುಕೃತ್ಯಕ್ಕೆ ಇಳಿಯುವ ಜಾಯಮಾನ ನನ್ನದಾಗಿದ್ದರೆ ನನ್ನ ಸರ್ಕಾರವನ್ನು ಅಲುಗಾಡಿಸಲು ಸಾಧ್ಯವಿರಲಿಲ್ಲ. 5/8