ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದಿರಾ ಕ್ಯಾಂಟೀನ್‌ಗಳಿಗೆ ಅನುದಾನ ಕಡಿತ: ಸರ್ಕಾರಕ್ಕೆ ಸಿದ್ದರಾಮಯ್ಯ ತರಾಟೆ

Last Updated 16 ಸೆಪ್ಟೆಂಬರ್ 2022, 5:43 IST
ಅಕ್ಷರ ಗಾತ್ರ

ಬೆಂಗಳೂರು: ಇಂದಿರಾ ಕ್ಯಾಂಟೀನ್‌ಗಳಿಗೆ ಅನುದಾನ ಕಡಿತಗೊಳಿಸಿರುವ ವಿಚಾರಕ್ಕೆ ಸಂಬಂಂಧಿಸಿ ರಾಜ್ಯ ಸರ್ಕಾರದ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಇಂದಿರಾ ಕ್ಯಾಂಟೀನ್‌ ವಿಚಾರಕ್ಕೆ ಸಂಬಂಧಿಸಿ ಸರಣಿ ಟ್ವೀಟ್ ಮಾಡಿರುವ ಅವರು, ‘ನಮ್ಮ ಸರ್ಕಾರ ಪ್ರಾರಂಭಿಸಿದ್ದ ಇಂದಿರಾ ಕ್ಯಾಂಟೀನ್‌ಗಳಿಗೆ ಅನುದಾನ ನೀಡದೆ ಬಿಜೆಪಿ ಸರ್ಕಾರ ಬಡವರ ಹೊಟ್ಟೆಗೆ ಹೊಡೆಯಲು ಹೊರಟಿದೆ’ ಎಂದು ಕಿಡಿಕಾರಿದ್ದಾರೆ.

ಇಂದಿರಾ ಕ್ಯಾಂಟೀನ್‌ಗಳಿಗೆ 2017-2018, 2018-19ರಲ್ಲಿ ಕ್ರಮವಾಗಿ ₹100 ಮತ್ತು ₹145 ಕೋಟಿ ಅನುದಾನ ನೀಡಿದ್ದ ಬಿಬಿಎಂಪಿ, ಈ ವರ್ಷ ಕೇವಲ ₹60 ಕೋಟಿ ಕೊಟ್ಟಿದೆ ಎಂದು ಸಿದ್ದರಾಮಯ್ಯ ಗುಡುಗಿದ್ದಾರೆ.

‘ಕಳಪೆ ದರ್ಜೆಯ ಊಟ, ತಿಂಡಿ ನೀಡಲಾಗುತ್ತಿದೆ ಎಂದು ಜನ ಬರುವುದಿಲ್ಲ ಎಂಬ ನೆಪವೊಡ್ಡಿ ಇಂದಿರಾ ಕ್ಯಾಂಟೀನ್‌ಗಳನ್ನು ಮುಚ್ಚುವುದು ಬಿಜೆಪಿ ಸರ್ಕಾರದ ಹುನ್ನಾರವಾಗಿದೆ. ಕ್ಯಾಂಟೀನ್‌ಗಳಿಗೆ ಪ್ರತಿದಿನ ಬರುತ್ತಿದ್ದ 300-400 ಜನರ ಸಂಖ್ಯೆ ಈಗ 50-100ಕ್ಕೆ ಇಳಿದಿದೆಯಂತೆ. ಹಾಗಾದರೇ ಬೆಂಗಳೂರು ನಗರದ ಬಡವರೆಲ್ಲರೂ ಶ್ರೀಮಂತರಾದರೇ’ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT