ಬುಧವಾರ, ಆಗಸ್ಟ್ 17, 2022
25 °C

ಪ್ರದೇಶವಾರು ಸಂಘಟನಾ ವೀಕ್ಷಕರನ್ನು ನೇಮಿಸಿದ ಜೆಡಿಎಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

JDS

ಬೆಂಗಳೂರು: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ, ಶಾಸಕ ಎಚ್.ಡಿ.ರೇವಣ್ಣ ಸೇರಿದಂತೆ ಪ್ರಮುಖ ನಾಯಕರ ನೇತೃತ್ವದಲ್ಲಿ ಪಕ್ಷದ ಪ್ರದೇಶವಾರು ಸಂಘಟನಾ ವೀಕ್ಷಕರನ್ನು ಸೋಮವಾರ ನೇಮಕ ಮಾಡಲಾಗಿದೆ.

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಮತ್ತು ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಲ್ಯಾಣ ಕರ್ನಾಟಕ, ಬೆಳಗಾವಿ ವಿಭಾಗ, ಮೈಸೂರು ವಿಭಾಗ ಸೇರಿದಂತೆ ಒಟ್ಟು 8 ವಿಭಾಗಗಳಿಗೆ ಸಂಘಟನಾ ವೀಕ್ಷಕರನ್ನು ನೇಮಕ ಮಾಡಲಾಗಿದೆ.

ಓದಿ: 

ಕಲ್ಯಾಣ ಕರ್ನಾಟಕ ಮತ್ತು ಬೆಳಗಾವಿ ವಿಭಾಗದ ಮೇಲುಸ್ತುವಾರಿಯನ್ನು ಎಚ್.ಡಿ.ಕುಮಾರಸ್ವಾಮಿ ಅವರಿಗೆ ವಹಿಸಲಾಗಿದೆ. ಮೈಸೂರು ವಿಭಾಗದ ಮೇಲುಸ್ತುವಾರಿಯನ್ನು ರೇವಣ್ಣ ಅವರಿಗೆ ವಹಿಸಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಹಾಗೂ ಕೊಡಗು ವಿಭಾಗಗಳಿಗೆ ಕ್ರಮವಾಗಿ ಮಾಜಿ ಶಾಸಕ ಎಚ್.ಎಸ್.ಶಿವಶಂಕರ್, ಸಂಸದ ಪ್ರಜ್ವಲ್ ರೇವಣ್ಣ, ಶಾರದಾ ಪೂರ್‍ಯಾನಾಯಕ್, ವೈ.ಎಸ್‌.ವಿ.ದತ್ತ ಮತ್ತು ಡಿ.ಯಶೋಧರ ಅವರನ್ನು ನೇಮಕ ಮಾಡಲಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು