ಮಂಗಳವಾರ, ಅಕ್ಟೋಬರ್ 26, 2021
23 °C

‌ಹತಾಶೆಯಲ್ಲಿರುವ ಈಶ್ವರಪ್ಪ ನಾಲಿಗೆ –ಮಿದುಳುಗೆ ಸಂಪರ್ಕ ತಪ್ಪಿದೆ: ಕಾಂಗ್ರೆಸ್

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ಬಿಜೆಪಿಯಲ್ಲಿ ಮೂಲೆಗುಂಪಾಗಿರುವ ತಾವು ಜೀವಮಾನದಲ್ಲಿ ಮುಖ್ಯಮಂತ್ರಿ ಆಗುವುದಿಲ್ಲ ಎಂಬ ಹತಾಶೆಯಲ್ಲಿರುವ ಕೆ.ಎಸ್‌.ಈಶ್ವರಪ್ಪ ಅವರಿಗೆ ಹುಚ್ಚು ಹಿಡಿದಿದೆ’ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

ಕಾಂಗ್ರೆಸ್‌ ನಾಯಕರ ಕುರಿತ ಈಶ್ವರಪ್ಪ ಅವರ ಹೇಳಿಕೆಯನ್ನು ಪ್ರಸ್ತಾಪಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಈಶ್ವರಪ್ಪ ಅವರಿಗೆ ಹುಚ್ಚು ಹಿಡಿದಿದ್ದು, ನಾಲಿಗೆ – ಮಿದುಳಿಗೆ ಸಂಪರ್ಕ ತಪ್ಪಿದೆ’ ಎಂದು ವ್ಯಂಗ್ಯವಾಡಿದೆ.

‘ಈಶ್ವರಪ್ಪ ಅವರೇ, ನಿಮ್ಮ ಚಿಕಿತ್ಸೆಯ ವೆಚ್ಚವನ್ನು ಕಾಂಗ್ರೆಸ್‌ ಭರಿಸುತ್ತದೆ. ಕೂಡಲೇ ನಿಮ್ಹಾನ್ಸ್‌ಗೆ ದಾಖಲಾಗಿ’ ಎಂದು ಕಾಂಗ್ರೆಸ್‌ ಕಿಡಿಕಾರಿದೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಅವರನ್ನು ಹುಚ್ಚಾಸ್ಪತ್ರೆಗೆ ಸೇರಿಸಬೇಕು ಎಂದು ಭಾನುವಾರ ಸಚಿವ ಕೆ.ಎಸ್.ಈಶ್ವರಪ್ಪ ವಿವಾದ್ಮಾತಕ ಹೇಳಿಕೆ ನೀಡಿದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು