ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಕೆಶಿ ಯಾರ ಶಿಷ್ಯ: ನಳಿನ್‌ ಕುಮಾರ್‌ ಕಟೀಲ್‌ ಪ್ರಶ್ನೆ

Last Updated 2 ಡಿಸೆಂಬರ್ 2022, 19:30 IST
ಅಕ್ಷರ ಗಾತ್ರ

ಬೆಂಗಳೂರು: ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಯಾರ ಶಿಷ್ಯ? ಎಲ್ಲಿಂದ ರಾಜಕಾರಣಕ್ಕೆ ಬಂದರು ಎಂದು ನಾನೇನೂ ಬಹಿರಂಗಪಡಿಸಬೇಕಿಲ್ಲ. ಅವರ ಇತಿಹಾಸ, ವ್ಯವಸ್ಥೆಗಳು, ರಕ್ತಸಿಕ್ತ ಕಾಂಗ್ರೆಸ್‌ ಚಟುವಟಿಕೆಗಳು ನನಗಿಂತ ಹೆಚ್ಚಾಗಿ ಬೆಂಗಳೂರಿನ ಜನರಿಗೆ ತಿಳಿದಿದೆ’ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ.

ಗುರುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಭಯೋತ್ಪಾದನೆ, ಕ್ರಿಮಿನಲ್‌ ಮತ್ತು ಗೂಂಡಾ ರಾಜಕೀಯದಂತಹ ಚಟುವಟಿಕೆಗಳನ್ನು ನಮ್ಮ ಪಕ್ಷ ಸಹಿಸುವುದಿಲ್ಲ ಮತ್ತು ಒಪ್ಪಿಕೊಳ್ಳುವುದಿಲ್ಲ ’ಎಂದರು.

‘ರಾಜಕೀಯ ವ್ಯವಸ್ಥೆಯಲ್ಲಿ ಸಹಜವಾಗಿ ಕೆಲವೊಂದು ಅಚಾತುರ್ಯಗಳಾಗುತ್ತವೆ. ಇಂತಹ ಘಟನೆಗಳು ಮತ್ತು ಕ್ರಿಮಿನಲ್‌ ಕೇಸುಗಳ ಕಾರಣವನ್ನೂ ಗಮನಿಸುತ್ತೇವೆ. ಎಲ್ಲ ಪ್ರಕರಣಗಳನ್ನೂ ಒಂದೇ ರೀತಿ ನೋಡಲು ಸಾಧ್ಯವಿಲ್ಲ. ಹಿಂದೆ ಕಾಂಗ್ರೆಸ್‌ ಸರ್ಕಾರ ಇದ್ದಾಗ ನಮ್ಮ ಸಂಘಟನೆಗಳ ಎಲ್ಲರ ಮೇಲೂ ಪ್ರಕರಣಗಳನ್ನು ದಾಖಲಿಸಿದ್ದಾರೆ. ಹಿಂದುತ್ವದ ಪರವಾದ ಹೋರಾಟ ಮಾಡಿದ್ದರ ವಿರುದ್ಧವೂ ಕೇಸುಗಳಿವೆ. ಹಿಂದುತ್ವದ ಹೋರಾಟಗಾರರನ್ನು ರೌಡಿ ಪಟ್ಟಿಗೂ ಸೇರಿಸಿದ್ದಾರೆ’ ಎಂದರು.

‘ಸಾಮಾಜಿಕ ಜಾಲತಾಣದಲ್ಲಿ ಕೆಲಸ ಮಾಡಿದ ಕೆಲವು ಬರಹಗಾರರು ಮತ್ತು ಪತ್ರಕರ್ತರನ್ನು ಸಿದ್ದರಾಮಯ್ಯ ಸರ್ಕಾರ ಜೈಲಿಗೆ ತಳ್ಳಿತ್ತು. ಹೀಗಾಗಿ ಎಲ್ಲವನ್ನೂ ನಾವು ತುಲನೆ ಮಾಡುತ್ತಿದ್ದೇವೆ. ಅಚಾತುರ್ಯದ ಪ್ರಕರಣಗಳನ್ನು ಪರಿಶೀಲಿಸುತ್ತಿದ್ದೇವೆ’ ಎಂದೂ ಅವರು ಹೇಳಿದರು.
‘ದೆಹಲಿ ಸೇರಿ ದೇಶದಲ್ಲಿ ಸಿಖ್ಖರ ನರಮೇಧ ಯಾರು ಮಾಡಿದ್ದಾರೆ ಎಂಬುದಕ್ಕೆ ನಾವೇನೂ ಉತ್ತರ ಕೊಡುವ ಅವಶ್ಯಕತೆ ಇಲ್ಲ. ಹಿಂದೆ ತಂದೂರ್‌ನಲ್ಲಿ ಬೆಂಕಿ ಹಾಕಿ ಯಾರನ್ನೋ ಸುಟ್ಟ ಉದಾಹರಣೆಗಳೂ ಇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT