ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಂಚ ರಾಕ್ಷಸ: ದಾರಿ ತಪ್ಪಿಸಲು ಬಿಜೆಪಿ ಯತ್ನ– ಸಿದ್ದರಾಮಯ್ಯ

Last Updated 30 ಆಗಸ್ಟ್ 2022, 21:06 IST
ಅಕ್ಷರ ಗಾತ್ರ

ಬೆಂಗಳೂರು: ‘ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರ ಹಿಂದೆ ವಿರೋಧ ಪಕ್ಷದವರಿದ್ದಾರೆ ಎಂದು ಹೇಳಿ ಜನರನ್ನು ದಾರಿ ತಪ್ಪಿಸಲು ಬಿಜೆಪಿಯವರು ಯತ್ನಿಸುತ್ತಿದ್ದಾರೆ’ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಅವರು, ‘ಸರ್ಕಾರ ನಡೆಸುವವರಿಗೆ ಸಣ್ಣ ಲಜ್ಜೆ ಮತ್ತು ಕಾನೂನಿನ ತಿಳಿವಳಿಕೆ ಇರುತ್ತಿದ್ದರೆ ಹೀಗೆಲ್ಲ ಮಾತನಾಡುತ್ತಿರಲಿಲ್ಲ’ ಎಂದಿದ್ದಾರೆ.

‘ಕಂದಾಯ, ಗೃಹ, ಜಲಸಂಪನ್ಮೂಲ, ಲೋಕೋಪಯೋಗಿ, ಸಾರಿಗೆ, ಉಪ ನೋಂದಣಿ, ಅರಣ್ಯ ಹೀಗೆ ಎಲ್ಲ ಇಲಾಖೆಗಳಲ್ಲಿ ಲಂಚ ರಾಕ್ಷಸ ಕುಣಿಯುತ್ತಿದ್ದಾನೆ. ಹೀಗಿದ್ದಾಗ ಸಾಮಾನ್ಯ ಜನರು ಯಾರ ಬಳಿಗೆ ಹೋಗಬೇಕು? ವಿರೋಧ ಪಕ್ಷದ ನಾಯಕರ ಬಳಿಯೂ ಬರಲು ಸಾಧ್ಯವಾಗದಿದ್ದರೆ ಜನ ಹತಾಶರಾಗಿ ಕೈಗೆ ಕಲ್ಲು, ದೊಣ್ಣೆಗಳನ್ನು ತೆಗೆದುಕೊಂಡು ಸರ್ಕಾರದ ವಿರುದ್ಧ ತಿರುಗಿ ಬೀಳುತ್ತಾರೆ ಎಂಬುದು ನೆನಪಿರಲಿ’ ಎಂದುಅವರು ಎಚ್ಚರಿಕೆ ನೀಡಿದ್ದಾರೆ.

‘ಗುತ್ತಿಗೆದಾರರ ಸಂಘದವರು ಒಂದು ವರ್ಷದಿಂದ ಹೋರಾಟ ಮಾಡುತ್ತಿದ್ದಾರೆ. ಮೋದಿಯವರಾಗಲಿ, ರಾಜ್ಯ ಬಿಜೆಪಿ ಸರ್ಕಾರವಾಗಲಿ ಅವರ ಮನವಿಗಳನ್ನು ಗಂಭೀರವಾಗಿ ಪರಿಗಣಿಸಿದ್ದರೆ ‌ಈ ಸಮಸ್ಯೆ ಬರುತ್ತಿರಲಿಲ್ಲ. ಬೆಳಗಾವಿಯ ಗುತ್ತಿಗೆದಾರ ಸಂತೋಷ ಪಾಟೀಲ ಆತ್ಮಹತ್ಯೆ ಮಾಡಿಕೊಳ್ಳುತ್ತಿರಲಿಲ್ಲ’ ಎಂದೂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT