ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

RSS ನಾಯಕರು ಬೊಮ್ಮಾಯಿಗೆ ರೌಡಿಮೋರ್ಚಾ ಕಟ್ಟಲು ಸಲಹೆ ನೀಡಿದ್ದಾರೆಯೇ: ಸಿದ್ದರಾಮಯ್ಯ

Last Updated 3 ಡಿಸೆಂಬರ್ 2022, 14:22 IST
ಅಕ್ಷರ ಗಾತ್ರ

ಬೆಂಗಳೂರು: ರಾಜಕೀಯ ನಾಯಕರು ರೌಡಿ ಶೀಟರ್‌ಗಳೊಂದಿಗೆ ಕಾಣಿಸಿಕೊಂಡಿರುವ ವಿಚಾರ ಕಾಂಗ್ರೆಸ್‌ –ಬಿಜೆಪಿ ನಡುವೆ ರಾಜಕೀಯ ಕೆಸರೆರಚಾಟಕ್ಕೆ ಕಾರಣವಾಗಿದೆ.

ರೌಡಿ ರಾಜಕೀಯ ವಿಚಾರ ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ‘ಬಾಯಿ ಬಿಟ್ಟರೆ ಸಂಸ್ಕೃತಿ, ಆಚಾರ, ವಿಚಾರದ‌ ಮಂತ್ರ‌ ಉದುರಿಸುವ ಆರ್‌ಎಸ್‌ಎಸ್‌ ನಾಯಕರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಕರೆಸಿ‌ಕೊಂಡದ್ದು ರೌಡಿಮೋರ್ಚಾ ಕಟ್ಟಲು ಸಲಹೆ ನೀಡಲಿಕ್ಕಾಗಿಯೇ? ಆರ್‌ಎಸ್‌ಎಸ್‌ ಮೌನ ಸಮ್ಮತಿ ಲಕ್ಷಣವೇ?’ ಎಂದು ಪ್ರಶ್ನಿಸಿದ್ದಾರೆ.

‘ಗಣಿಲೂಟಿಕೋರ ರೌಡಿಗಳನ್ನು ಕಟ್ಟಿಕೊಂಡು ಅಧಿಕಾರಕ್ಕೆ ಬಂದಿದ್ದ ಬಿಜೆಪಿಯ ಮುಖ್ಯಮಂತ್ರಿಗಳು ಕೊನೆಗೆ ಜೈಲು ಪಾಲಾಗಬೇಕಾಯಿತು. ಈಗ ಹೊಸ ರೌಡಿಪಡೆ ಕಟ್ಟುತ್ತಿರುವುದು ಯಾರನ್ನು ಜೈಲಿಗೆ ಕಳಿಸಲು’ ಸಿದ್ದರಾಮಯ್ಯ ಟೀಕಿಸಿದ್ದಾರೆ.

‘ಸೋಲಿನ ಭೀತಿಯಲ್ಲಿರುವ ರಾಜ್ಯ ಬಿಜೆಪಿ ಬೀದಿ ರೌಡಿಗಳನ್ನು ಕಟ್ಟಿಕೊಂಡು ಚುನಾವಣೆ ಗೆಲ್ಲಲು ಹೊರಟಿರುವುದು, ಧರ್ಮ, ಸಂಸ್ಕೃತಿ ಬಗ್ಗೆ ಬೊಗಳೆ ಬಿಡುವ ಸಂಘ ಪರಿವಾರದ ನೈತಿಕ‌ ನೈತಿಕ ಅಧಃಪತನವಲ್ಲದೆ ಮತ್ತೇನು?’ ಎಂದು ಸಿದ್ದರಾಮಯ್ಯ ಗುಡುಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT