ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಳುಗುವ ದೋಣಿಯಲ್ಲಿ ಕುಳಿತ ಸಿದ್ದರಾಮಯ್ಯ ಮೊಸಳೆ ತಬ್ಬಿಕೊಳ್ತಿದ್ದಾರೆ: ಬಿಜೆಪಿ

Last Updated 10 ಜೂನ್ 2021, 14:15 IST
ಅಕ್ಷರ ಗಾತ್ರ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಳುಗುತ್ತಿರುವ ದೋಣಿಯಲ್ಲಿ ಕುಳಿತು ಮೊಸಳೆ ತಬ್ಬಿಕೊಳ್ಳುವ ಯತ್ನ ನಡೆಸುತ್ತಿದ್ದಾರೆ ಎಂದು ಬಿಜೆಪಿ ವ್ಯಂಗ್ಯವಾಡಿದೆ.

ಬಿಎಸ್‍ವೈ, ಹೈಕಮಾಂಡ್ ಎರಡೂ ದುರ್ಬಲ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಟ್ವಿಟರ್‌ನಲ್ಲಿ ತಿರುಗೇಟು ಕೊಟ್ಟಿರುವ ಬಿಜಿಪಿ, ‘ಸಿದ್ದರಾಮಯ್ಯನವರೇ, ಒಂದು‌ ರಾಷ್ಟ್ರೀಯ ಪಕ್ಷಕ್ಕೆ ಖಾಯಂ ರಾಷ್ಟ್ರೀಯ ಅಧ್ಯಕ್ಷರ ನೇಮಕ ಮಾಡಲಾಗದ ನೀವು ಬಿಜೆಪಿ ಪಕ್ಷದ ಬಗ್ಗೆ ಮಾತನಾಡುವುದು ಮೂರ್ಖತನ’ ಎಂದು ಕಿಡಿಕಾರಿದೆ.

‘ಸಿದ್ದರಾಮಯ್ಯ ಅವರು ಮುಳುಗುತ್ತಿರುವ ದೋಣಿಯಲ್ಲಿ ಕುಳಿತು ಮೊಸಳೆ ತಬ್ಬಿಕೊಳ್ಳುವ ಯತ್ನ ನಡೆಸುತ್ತಿದ್ದಾರೆ. ಮೊದಲು ತಮ್ಮ ಪಕ್ಷದ ಹುಳುಕು ಸರಿಪಡಿಸಿಕೊಳ್ಳಿ’ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ಇದನ್ನೂ ಓದಿ... ಬಿಎಸ್‍ವೈ, ಬಿಜೆಪಿ ಹೈಕಮಾಂಡ್ ಎರಡೂ ದುರ್ಬಲ: ಮಾಜಿ ಸಿಎಂ ಸಿದ್ದರಾಮಯ್ಯ

ಇದಕ್ಕೂ ಮುನ್ನ ನಾಯಕತ್ವ ಬದಲಾವಣೆ ಕುರಿತು ಪ್ರತಿಕ್ರಿಯಿಸಿದ್ದ ಸಿದ್ದರಾಮಯ್ಯ, ‘ಬಿಜೆಪಿಯಲ್ಲಿ ಮುಖ್ಯಮಂತ್ರಿ ಮತ್ತು ಹೈಕಮಾಂಡ್ ಎರಡೂ ದುರ್ಬಲ. ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡಬೇಡಿ ಎಂದು ಅರುಣ್‌ ಸಿಂಗ್ ಹೇಳಿದ್ದಾರೆ. ಹಾಗಾದರೆ ಬದಲಾವಣೆ ಆಗಬೇಕು ಎಂದವರ ವಿರುದ್ಧ ಏಕೆ ಕ್ರಮವಿಲ್ಲ. ಇದರಿಂದ ರವಾನೆಯಾಗುವ ಸಂದೇಶವಾದರೂ ಏನು. ಯಡಿಯೂರಪ್ಪ ಅವರೇ ಕಳಪೆ ಮುಖ್ಯಮಂತ್ರಿ. ಇನ್ನು ಬೇರೆಯವರು ಹೇಗಿರಬೇಕು’ ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT