ಶನಿವಾರ, ಮೇ 21, 2022
19 °C
ಬಿಟ್‌ ಕಾಯಿನ್‌ ಹಗರಣ

ಸಿದ್ದರಾಮಯ್ಯ ಒಂದೇ ಕಲ್ಲಿನಲ್ಲಿ ಹಲವು ಹಕ್ಕಿ ಹೊಡೆದಿದ್ದಾರೆ: ಬಿಜೆಪಿ ಟೀಕೆ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಟ್‌ ಕಾಯಿನ್‌ ಹಗರಣದಿಂದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಒಂದೇ ಕಲ್ಲಿನಲ್ಲಿ ಹಲವು ಹಕ್ಕಿ ಹೊಡೆದಿದ್ದಾರೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ.

ಬಿಟ್‌ ಕಾಯಿನ್‌ ಹಗರಣ ಪ್ರಸ್ತಾಪಿಸಿ ಸರಣಿ ಟ್ವೀಟ್‌ ಮಾಡಿರುವ ಬಿಜೆಪಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದೆ.

‘ಶಂಕಿತ ಬಿಟ್‌ ಕಾಯಿನ್‌ ಹಗರಣದಿಂದ ಸಿದ್ದರಾಮಯ್ಯ ಒಂದೇ ಕಲ್ಲಿನಲ್ಲಿ ಹಲವು ಹಕ್ಕಿ ಹೊಡೆದಿದ್ದಾರೆ. ತಮ್ಮನ್ನು ಸುತ್ತಿಕೊಂಡ ದಲಿತ ವಿರೋಧಿ ಆರೋಪದಿಂದ ತಪ್ಪಿಸಿಕೊಳ್ಳುವುದು. ಜತೆಗೆ, ಬಿಜೆಪಿ ವಿರುದ್ಧ ಸಲ್ಲದ ಅಪಪ್ರಚಾರ ನಡೆಸುವುದು’ ಎಂದು #ಬುರುಡೆರಾಮಯ್ಯ ಎಂಬ ಹ್ಯಾಷ್‌ಟ್ಯಾಗ್ ಸಹಿತ ಬಿಜೆಪಿ ಟ್ವೀಟ್ ಮಾಡಿದೆ.

‘ಡಿಕೆಶಿ ವಿರುದ್ಧ ಮಾತನಾಡಿದ್ದ ತಮ್ಮ ಆಪ್ತ ಉಗ್ರಪ್ಪ ಅವರನ್ನು ಶಿಸ್ತುಕ್ರಮದಿಂದ ರಕ್ಷಿಸುವುದು. ಮೊಹಮ್ಮದ್ ನಲಪಾಡ್ ಅವರಿಗೆ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ತಪ್ಪಿಸುವುದು. ಡಿಕೆಶಿ ಅವರನ್ನು ರಾಜಕೀಯವಾಗಿ ಮೂಲೆಗುಂಪು ಮಾಡುವುದು’ ಎಂದು ಬಿಜೆಪಿ ಆರೋಪಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು