ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಪಕ್ಷ ನಾಯಕ ಡಿಸಿಗಳ ಜತೆ ಮೀಟಿಂಗ್ ‌ನಡೆಸಿದ‌ ಉದಾಹರಣೆ ಇದೆಯೇ?: ಬಿಜೆಪಿ

Last Updated 20 ಮೇ 2021, 14:17 IST
ಅಕ್ಷರ ಗಾತ್ರ

ಬೆಂಗಳೂರು: ವಿಪಕ್ಷ ನಾಯಕರಾದವರು ಎಸ್ಪಿ, ಡಿಸಿಗಳ ಜತೆ ಝೂಮ್‌ ಮೀಟಿಂಗ್ ‌ನಡೆಸಿದ‌ ಉದಾಹರಣೆ ಎಲ್ಲಾದರೂ ಇದೆಯೇ? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ವಾಗ್ದಾಳಿ ನಡೆಸಿದೆ.

ಈ ವಿಚಾರವಾಗಿ ಸರಣಿ ಟ್ವೀಟ್‌ ಮಾಡಿರುವ ಬಿಜೆಪಿ, ‘ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಹೀನಾಯವಾಗಿ ಸೋತು, ಬಾದಾಮಿಯಲ್ಲಿ ಅಲ್ಪಮತದಲ್ಲಿ ಗೆದ್ದ ಸಿದ್ದರಾಮಯ್ಯ ಅವರಿಗೆ ಸಿಎಂ ಆಗಿದ್ದ ಭ್ರಾಂತಿ ಇನ್ನೂ ಬಿಟ್ಟಿಲ್ಲ. ಪ್ರತಿಪಕ್ಷ ನಾಯಕ ಎಸ್ಪಿ, ಡಿಸಿಗಳ ಜತೆ ಝೂಮ್‌ ಮೀಟಿಂಗ್ ‌ನಡೆಸಿದ‌ ಉದಾಹರಣೆ ಎಲ್ಲಾದರೂ ಇದೆಯೇ? ಆಗಷ್ಟೇ ನಿದ್ದೆಯಿಂದ ಎದ್ದು ಬಂದು ಪತ್ರ ಬರೆದ ಹಾಗಿದೆ’ ಎಂದು ವ್ಯಂಗ್ಯವಾಡಿದೆ.

‘ಮಾನ್ಯ ಸಿದ್ದರಾಮಯ್ಯ ಅವರೇ, ನಿಮಗೆ ಅಗತ್ಯ ಮಾಹಿತಿ ಬೇಕಿದ್ದರೆ ಮುಖ್ಯ ಕಾರ್ಯದರ್ಶಿ ಅವರಿಂದ ಪಡೆಯಬಹುದಿತ್ತು. ಅದನ್ನು ಬಿಟ್ಟು ಡಿಸಿ, ಎಸ್ಪಿಗಳ ಜತೆ ಝೂಮ್ ಮೀಟಿಂಗ್ ನಡೆಸುತ್ತೇನೆಂದರೆ ಅರ್ಥವೇನು? ನೀವು ಕೇಳಿದ್ದಕ್ಕೆಲ್ಲ ಒಪ್ಪಿಕೊಳ್ಳುವುದಕ್ಕೆ ಸರ್ಕಾರವೇನು ಛತ್ರವಲ್ಲ’ ಎಂದು ಬಿಜೆಪಿ ಪ್ರಶ್ನಿಸಿದೆ.

‘ಕೋವಿಡ್ ಸೋಂಕಿತರ ಬೆಡ್‌ಗಳನ್ನು ಬ್ಲಾಕ್‌ ಮಾಡಿದ್ದ ಕಾಂಗ್ರೆಸ್‌ ಈಗ ಬ್ಲ್ಯಾಕ್‌ ಫಂಗಸ್‌ ಅನ್ನು ಬ್ಲಾಕ್‌ ಫಂಗಸ್ ಎನ್ನುತ್ತಿದೆ. ಬ್ಲ್ಯಾಕ್ ಫಂಗಸ್ ಸೋಂಕು ನಿರ್ವಹಣೆಗಾಗಿ ವಾರಗಳ ಹಿಂದೆ ಸರ್ಕಾರ ತಜ್ಞರ ಸಮಿತಿಯನ್ನು ರಚಿಸಿದೆ. ನಿದ್ರೆಯಿಂದ ಎಚ್ಚೆತ್ತುಕೊಳ್ಳಿ. ಪೂರ್ವಾಗ್ರಹ ಪೀಡಿತರಾಗಿ ಪ್ರಶ್ನಿಸುವ ಮನಸ್ಥಿತಿ ಒಳ್ಳೆಯದಲ್ಲ’ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿಕಾರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT