ಗುರುವಾರ , ಮೇ 26, 2022
28 °C

ಕಾಂಗ್ರೆಸ್‌ನವರು ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ: ಸಚಿವ ಸೋಮಶೇಖರ್‌ ಟೀಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: ‘ಕಾಂಗ್ರೆಸ್‌ನವರಿಗೆ ಮಾಡಲು ಬೇರೆ ಕೆಲಸ ಇಲ್ಲ. ಅದಕ್ಕೆ ಅವರು ಏನೇನೋ ಮಾತನಾಡುತ್ತಾರೆ. ರಾಜಕೀಯ ಕೆಸರೆರಚಾಟ, ಒಬ್ಬರ ಮೇಲೊಬ್ಬರು ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ’ ಎಂದು ಸಹಕಾರ ಸಚಿವ ಎಸ್‌.ಟಿ.ಸೋಮಶೇಖರ್‌ ತಿರುಗೇಟು ನೀಡಿದರು.

‘ಬಿಜೆಪಿ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ’ ಎಂಬ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಹೇಳಿಕೆಗೆ ಬುಧವಾರ ಇಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿ, ’ಹಾವಿನ ಬುಟ್ಟಿ ಇಟ್ಟುಕೊಂಡು ಹಾವು ಬಿಡ್ತೇನೆ, ಬಿಡ್ತೇನೆ ಎಂದು ಹೇಳುತ್ತಾ ಇರುತ್ತಾರೆ. ಹಾವಿನ ಬುಟ್ಟಿ ತೆರೆದರೆ ತಾನೇ ಗೊತ್ತಾಗೋದು, ಅದು ಬುಸ್‌ ಅನ್ನುತ್ತಾ ಅಥವಾ ಠುಸ್ ಅನ್ನುತ್ತಾ ಅಂತ’ ಎಂದು ಲೇವಡಿ ಮಾಡಿದರು.

‘ಕಾಂಗ್ರೆಸ್ ಶಾಸಕರು ತಮ್ಮ ಸಂಪರ್ಕದಲ್ಲಿದ್ದಾರೆ ಎಂದು ರಮೇಶ ಜಾರಕಿಹೊಳಿ ಅವರೂ ಹೇಳಿದ್ದಾರೆ. ಬಿಜೆಪಿಯವರು ಸಂಪರ್ಕದಲ್ಲಿದ್ದಾರೆ ಎಂದು ಕಾಂಗ್ರೆಸ್‌ನವರು ಹೇಳುತ್ತಿದ್ದಾರೆ. ಈ ರೀತಿಯ ಹೇಳಿಕೆ ಕೊಡುವುದು ಇತ್ತೀಚೆಗೆ ಎಲ್ಲರಿಗೂ ಚಟ ಆಗಿದೆ. ಅದನ್ನು ಗಂಭೀರವಾಗಿ ಪರಿಗಣಿಸಬೇಕಿಲ್ಲ’ ಎಂದರು.

‘ಕೋವಿಡ್‌ ನಿಯಂತ್ರಣ, ರಾಜ್ಯದ ಅಭಿವೃದ್ಧಿಯತ್ತ ಮಾತ್ರ ನಾವು ಗಮನ ಹರಿಸಿದ್ದೇವೆ. ಕಾಂಗ್ರೆಸ್‌ ನಾಯಕರು ಇಲ್ಲಸಲ್ಲದ ಹೇಳಿಕೆ ಕೊಡುವ ಬದಲು ಬದಲು ಅಭಿವೃದ್ಧಿ ಕೆಲಸದಲ್ಲಿ ಮುಖ್ಯಮಂತ್ರಿ ಜತೆ ಕೈಜೋಡಿಸಲಿ’ ಎಂದು ಸಲಹೆ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು