ಗುರುವಾರ , ಅಕ್ಟೋಬರ್ 22, 2020
21 °C

ವಿದ್ಯಾರ್ಥಿಗಳಿಗೆ ಸೆ. 21ರಿಂದ ಶಾಲೆಗಳಿಗೆ ಹೋಗಲು ಅವಕಾಶ ಇಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Karnataka education department

ಬೆಂಗಳೂರು: ಒಂಬತ್ತನೇ ತರಗತಿಯಿಂದ 12ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಇದೇ 21ರಿಂದ ಶಾಲೆಗಳನ್ನು ತೆರೆದು, ಸಂದೇಹ ಪರಿಹರಿಸಿಕೊಳ್ಳಲು ಅವಕಾಶ ಕಲ್ಪಿಸಬಹುದೆಂದು ಕೇಂದ್ರ ಸರ್ಕಾರ ಸೂಚಿಸಿದ್ದರೂ, ರಾಜ್ಯದಲ್ಲಿ ಈ ತಿಂಗಳ ಅಂತ್ಯದವರೆಗೆ ಅನುಮತಿ ನೀಡದಿರಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ತೀರ್ಮಾನಿಸಿದೆ.

‘ರಾಜ್ಯದಲ್ಲಿ ಕೋವಿಡ್‌ ಹರಡುತ್ತಿರುವ ಕಾರಣ, ಸದ್ಯದ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು ಶಾಲೆಗಳಿಗೆ ಬರುವುದು ಕ್ಷೇಮಕರ ಅಲ್ಲ ಎಂಬ ಕಾರಣಕ್ಕೆ ಈ ತೀರ್ಮಾನ ಕೈಗೊಳ್ಳಲಾಗಿದೆ’ ಎಂದು ಇಲಾಖೆಯ ಪ್ರಧಾನ ಕಾರ್ಯದರ್ಶಿ ಎಸ್‌.ಆರ್‌. ಉಮಾಶಂಕರ್‌ ತಿಳಿಸಿದ್ದಾರೆ.

ಇದನ್ನೂ ಓದಿ: ಸೆ. 21ರಿಂದ ಶಾಲೆಗಳು ತೆರೆಯಲಿವೆ ಆದರೆ, ತರಗತಿಗಳ ಪ್ರಾರಂಭವಿಲ್ಲ: ಸುರೇಶ್ ಕುಮಾರ್

‘ಮುಂದಿನ ದಿನಗಳಲ್ಲಿ ಪರಿಸ್ಥಿತಿಯನ್ನು ಅವಲೋಕಿಸಿ ಈ ಬಗ್ಗೆ ತೀರ್ಮಾನಕ್ಕೆ ಬರಲಾಗುವುದು’ ಎಂದೂ ಅವರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಆ. 29ರಂದು ಹೊರಡಿಸಿದ್ದ ಮಾರ್ಗಸೂಚಿಯಲ್ಲಿ, ರಾಜ್ಯಗಳು ಕಂಟೈನ್‌ಮೆಂಟ್‌ ಪ್ರದೇಶ ಹೊರತುಪಡಿಸಿ 9ನೇ ತರಗತಿಯಿಂದ 12ನೇ ತರಗತಿಯ ವರೆಗಿನ ವಿದ್ಯಾರ್ಥಿಗಳಿಗೆ ಸೆ. 21ರಿಂದ ಶಾಲೆಗಳನ್ನು ತೆರೆದು ಸಂದೇಹ ‍ಪರಿಹರಿಸಲು ಅನುಮತಿ ನೀಡಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು