ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

PSI ನೇಮಕಾತಿ ಹಗರಣ: ಪೊಲೀಸ್ ಠಾಣೆಯಲ್ಲೇ ಬ್ಯಾಡರಹಳ್ಳಿ ಪಿಎಸ್‌ಐ ಹರೀಶ್ ಅರೆಸ್ಟ್!

Last Updated 15 ಜೂನ್ 2022, 13:17 IST
ಅಕ್ಷರ ಗಾತ್ರ

ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಅಧಿಕಾರಿಗಳು, ನಗರದ ಬ್ಯಾಡರಹಳ್ಳಿ ಪಿಎಸ್ಐ ಕೆ. ಹರೀಶ್ ಅವರನ್ನು ಠಾಣೆಯಲ್ಲೇ ಬಂಧಿಸಿ ಕರೆದೊಯ್ದಿದ್ದಾರೆ.

‘2018ರಲ್ಲಿ ಪಿಎಸ್‌ಐ ಹುದ್ದೆಗೆ ಆಯ್ಕೆಯಾಗಿದ್ದ ಮಾಗಡಿ ತಾಲ್ಲೂಕಿನ ಹರೀಶ್, ಇತ್ತೀಚೆಗೆ ನಡೆದಿದ್ದ 545 ಪಿಎಸ್ಐ ಹುದ್ದೆಗಳ ಅಕ್ರಮ ಪ್ರಕರಣದಲ್ಲಿ ಬಂಧಿತನಾದ ಅಭ್ಯರ್ಥಿಯೊಬ್ಬರಿಗೆ ಸಹಾಯ ಮಾಡಿದ್ದ. ಅಭ್ಯರ್ಥಿ ಹೇಳಿಕೆ ಆಧರಿಸಿ ಹರೀಶ್‌ನನ್ನು ಬಂಧಿಸಲಾಗಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಬೇಕಿದೆ’ ಎಂದು ಸಿಐಡಿ ಮೂಲಗಳು ಹೇಳಿವೆ.

‘ರಿಸರ್ವ್ ಸಬ್‌ ಇನ್‌ಸ್ಪೆಕ್ಟರ್ (ಆರ್‌ಎಸ್‌ಐ) ಜೊತೆ ಒಡನಾಟ ಹೊಂದಿದ್ದ ಹರೀಶ್, ಪರಿಚಯಸ್ಥ ಅಭ್ಯರ್ಥಿಯಿಂದ ₹ 60 ಲಕ್ಷಕೊಡಿಸಿ ಹುದ್ದೆಗೆ ಅಕ್ರಮವಾಗಿ ಆಯ್ಕೆಯಾಗುವಂತೆ ಮಾಡಿದ್ದ. ಇದಕ್ಕೆಂದು ಆತ ಕಮಿಷನ್ ಸಹ ಪಡೆದಿದ್ದ. ಈ ಬಗ್ಗೆ ಮಾಹಿತಿ ಖಚಿತಪಡಿಸಿಕೊಳ್ಳಲು ಹರೀಶ್‌ಗೆ ನೋಟಿಸ್ ನೀಡಲಾಗಿತ್ತು. ಆದರೆ, ಆತ ವಿಚಾರಣೆಗೆ ಬಂದಿರಲಿಲ್ಲ. ಇದೀಗ ಆತನನ್ನು ಬಂಧಿಸಲಾಗಿದ್ದು, ಕಸ್ಟಡಿಗೆ ಪಡೆದು ವಿಚಾರಣೆ ನಡೆಸಬೇಕಿದೆ’ ಎಂದೂ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT