ಶನಿವಾರ, ಏಪ್ರಿಲ್ 1, 2023
32 °C
ಪಿಎಸ್‌ಐ ಹಗರಣದ ಆರೋಪಿ ಅಜ್ಞಾತ ಸ್ಥಳದಿಂದ ವಿಡಿಯೊ

ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆಗೆ ಪಿಎಸ್ಐ ಹಗರಣದ ಆರೋಪಿ ಒಲವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರಗಿ: ಪಿಎಸ್‌ಐ ಅಕ್ರಮ ನೇಮಕಾತಿ ಹಗರಣದ ಪ್ರಮುಖ ಆರೋಪಿ, ಆರ್.ಡಿ.ಪಾಟೀಲ ಶುಕ್ರವಾರ ಮಧ್ಯರಾತ್ರಿ ಅಜ್ಞಾತ ಸ್ಥಳದಿಂದ ವಿಡಿಯೊ ಮಾಡಿ, ಜಾಲತಾಣದಲ್ಲಿ ಹರಿಬಿಟ್ಟಿದ್ದಾನೆ.

7 ನಿಮಿಷ 14 ಸೆಕೆಂಡ್‌ಗಳ ವಿಡಿಯೊದಲ್ಲಿ ಪಾಟೀಲ, ‘8–9 ತಿಂಗಳು ಕೆಲ ರಾಜಕೀಯ ಮುಖಂಡರು ಕುತಂತ್ರದಿಂದ ನನ್ನನ್ನು ಹಾಗೂ ನನ್ನ ಸಹೋದರ ಮಹಾಂತೇಶ ಪಾಟೀಲ ಅವರನ್ನು ಪಿಎಸ್‌ಐ ಪ್ರಕರಣದಲ್ಲಿ ಉದ್ದೇಶ ಪೂರ್ವಕವಾಗಿ ಸಿಲುಕಿಸಿದ್ದಾರೆ. ಸಮಾಜ ಸೇವೆ, ಚುನಾವಣಾ ಸ್ಪರ್ಧೆಗೆ ಬರಬಹುದು ಎಂಬ ಭಯದಿಂದ ನಮ್ಮನ್ನು ಈ ಪ್ರಕರಣದಲ್ಲಿ ಸಿಲುಕಿಸಿದ್ದಾರೆ’ ಎಂದು ಹೇಳಿದ್ದಾನೆ.

‘ಈಗ ಅಫಜಲಪುರ ಕ್ಷೇತ್ರದ ಜನರು ನನಗೆ ಅವಕಾಶ ಮಾಡಿಕೊಟ್ಟರೆ, ಅವರು ಬಯಸಿದರೆ 2023ರ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತೇನೆ’ ಎಂದು ವಿವರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು