ಸೋಮವಾರ, ಜುಲೈ 4, 2022
24 °C

ಪಿಎಸ್‌ಐ ನೇಮಕ ಹಗರಣದಲ್ಲಿ ಡಿ.ಕೆ. ಶಿವಕುಮಾರ್ ಪಾಲೆಷ್ಟು?: ಬಿಜೆಪಿ ಕಿಡಿ 

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪಿಎಸ್‌ಐ ನೇಮಕ ಹಗರಣ ಸಂಬಂಧ ಆರೋಪಿ ದಿವ್ಯಾ ಮತ್ತು ಡಿ.ಕೆ. ಶಿವಕುಮಾರ್ ಪರಿಚಿತರು ಎಂಬ ವಿಚಾರವಾಗಿ ರಾಜ್ಯ ಬಿಜೆಪಿ ಕಿಡಿಕಾರಿದೆ.

ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಪಿಎಸ್‌ಐ ನೇಮಕ ಹಗರಣದ ಆರೋಪಿ ದಿವ್ಯಾ ನಿವಾಸಕ್ಕೆ ಡಿ.ಕೆ. ಶಿವಕುಮಾರ್ ಬಂದಿದ್ದರು ಎಂಬುದಕ್ಕೆ ಫೋಟೋ ಸಾಕ್ಷಿ ಇದೆ. ಆರೋಪಿಯು ಪರಿಚಿತರು ಎಂದು ಡಿಕೆಶಿ ಒಪ್ಪಿಕೊಂಡಿದ್ದಾರೆ. ಇತರ ಆರೋಪಿಗಳಾದ ರುದ್ರಗೌಡ ಪಾಟೀಲ್, ಶಿವಾನಂದ ಪಾಟೀಲ್ ಕಾಂಗ್ರೆಸ್ ಪದಾಧಿಕಾರಿಗಳಾಗಿದ್ದಾರೆ.  ಹಾಗಾದರೆ ಈ ಹಗರಣದಲ್ಲಿ ಡಿಕೆಶಿ ಪಾಲೆಷ್ಟು? ಎಂದಿದೆ.

ಪ್ರಿಯಾಂಕ್ ಖರ್ಗೆ ಅವರಿಗೆ ನೊಟೀಸ್‌ ನೀಡಿದ್ದು ತಪ್ಪು ಎನ್ನುವ ಕಾಂಗ್ರೆಸ್ಸಿಗರೇ, ಪ್ರೆಸ್ ಮೀಟ್ ಮಾಡಿ ಪುರಾವೆಯಿಲ್ಲದೆ ಬಾಯಿಗೆ ಬಂದಂತೆ ಮಾತನಾಡುವುದು ತಪ್ಪಲ್ಲವೇ? ಪುರಾವೆ ಇದ್ದಿದ್ದರೆ ತನಿಖಾಧಿಕಾರಿಗಳಿಗೆ ನೀಡದೆ ಇರುವುದು ತಪ್ಪಲ್ಲವೇ? ವಿಚಾರಣೆಗೆ ಗೈರು ಹಾಜರಾಗಿದ್ದು ತಪ್ಪಲ್ಲವೇ? ಎಂದು ಸರಣಿ ಪ್ರಶ್ನೆಗಳನ್ನು ಕೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು