ಶನಿವಾರ, ಏಪ್ರಿಲ್ 1, 2023
32 °C

ಪಿಎಸ್‌ಐ ನೇಮಕಾತಿ ಹಗರಣ: ಆರ್.ಡಿ. ಪಾಟೀಲ ಮನೆ ಮೇಲೆ ಇ.ಡಿ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಲಬುರಗಿ: ಪಿಎಸ್‌ಐ ಅಕ್ರಮ ನೇಮಕಾತಿ ಹಗರಣದ ಪ್ರಮುಖ ಆರೋಪಿಗಳಾದ ಆರ್.ಡಿ.ಪಾಟೀಲ, ದಿವ್ಯಾ ಹಾಗರಗಿ ಸೇರಿ ಐವರು ನಿವಾಸದ ಮೇಲೆ ಜಾರಿ ನಿರ್ದೇಶನಾಲಯದ(ಇಡಿ) ಅಧಿಕಾರಿಗಳು ಗುರುವಾರ ದಾಳಿ ಮಾಡಿ, ದಾಖಲೆಗಳು ಪರಿಶೀಲಿಸಿದರು.

ಎರಡು ತಂಡಗಳಲ್ಲಿ ಬಂದ ಅಧಿಕಾರಿಗಳು ಆರ್.ಡಿ.ಪಾಟೀಲ, ಮಹಾಂತೇಶ ಪಾಟೀಲ, ದಿವ್ಯಾ ಹಾಗರಗಿ, ಮಂಜುನಾಥ ಮೇಳಕುಂದಿ ಮತ್ತು ಕಾಶಿನಾಥ ಚಿಲ್ಲಾ ಅವರ ಮನೆಗಳ ಮೇಲೆ ದಾಳಿ ನಡೆಸಿದರು. ದಾಖಲೆಗಳ ಪರಿಶೀಲನೆ ನಡೆದಿದೆ ಎಂದು ಮೂಲಗಳು ತಿಳಿಸಿವೆ.

ಅಕ್ಕಮಹಾದೇವಿ ಬಡಾವಣೆ ನಿವಾಸದಲ್ಲಿದ್ದ ಆರ್‌.ಡಿ ಪಾಟೀಲ ಮತ್ತು ಕುಟುಂಬಸ್ಥರು ಅಧಿಕಾರಿಗಳ ತಪಾಸಣೆಗೆ ಸಹಕರಿಸಿದ್ದಾಗಿ ಹೇಳಿವೆ.

ಅಧಿಕಾರಿಗಳು ನೆರೆಯ ತೆಲಂಗಾಣ ರಾಜ್ಯದ ನಾಮಫಲಕ ಹೊಂದಿದ ವಾಹನಗಳಲ್ಲಿ ಬಂದಿದ್ದರು. ಪಿಎಸ್ಐ ಅಕ್ರಮ ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ಅಭ್ಯರ್ಥಿಗಳಿಂದ ಪಡೆದ ಹಣದ ದಾಖಲೆಗಳು, ಇತರೆ ಮಾಹಿತಿ ಕಲೆ ಹಾಕಿ ಪರಿಶೀಲಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು