ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

660 ಸಹಾಯಕ ಎಂಜಿನಿಯರ್‌ ಹುದ್ದೆ: ಸಂದರ್ಶನಕ್ಕೆ 1,974 ಅಭ್ಯರ್ಥಿಗಳು ಆಯ್ಕೆ

Last Updated 18 ಅಕ್ಟೋಬರ್ 2022, 14:48 IST
ಅಕ್ಷರ ಗಾತ್ರ

ಬೆಂಗಳೂರು: ಲೋಕೋಪಯೋಗಿ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಎಂಜಿನಿಯರ್‌ (ಗ್ರೇಡ್ 1) 660 (ಹೈದರಾಬಾದ್‌– ಕರ್ನಾಟಕ 60) ಹುದ್ದೆಗಳ ನೇಮಕಾತಿಗೆ ನಡೆಸಿದ್ದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ, 1:3 ಅನುಪಾತದಲ್ಲಿ ಸಂದರ್ಶನಕ್ಕೆ ಆಯ್ಕೆಯಾದ 1,974 ಅಭ್ಯರ್ಥಿಗಳ ಪಟ್ಟಿಯನ್ನು ಕೆಪಿಎಸ್‌ಸಿ ಮಂಗಳವಾರ ಪ್ರಕಟಿಸಿದೆ.

ಈ ಹುದ್ದೆಗಳ ನೇಮಕಾತಿಗೆ 2020 ಜುಲೈ 30ರಂದು ಕೆಪಿಎಸ್‌ಸಿ ಅಧಿಸೂಚನೆ ಹೊರಡಿಸಿತ್ತು. 2021ರ ಡಿ. 14 ಮತ್ತು 15ರಂದು ಸ್ಪರ್ಧಾತ್ಮಕ ಪರೀಕ್ಷೆ ನಡೆದಿತ್ತು. ಅಂದು ರೈಲು ವಿಳಂಬದ ಕಾರಣಕ್ಕೆ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಕ್ಕೆ ತಲುಪಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಡಿ. 29ರಂದು ಮರು ಪರೀಕ್ಷೆ ನಡೆಸಲಾಗಿತ್ತು.

ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ (2019) ಈ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮೂಲಕ ಪರೀಕ್ಷೆ ನಡೆಸಲಾಗಿತ್ತು. ಆದರೆ, ನಂತರ ಬಂದ ಬಿಜೆಪಿ ಸರ್ಕಾರ, ಆ ನೇಮಕಾತಿ ಪ್ರಕ್ರಿಯೆಯನ್ನು ರದ್ದುಪಡಿಸಿ, ಹೊಸದಾಗಿ 60 ಹುದ್ದೆಗಳನ್ನು (ಹೈದರಾಬಾದ್‌– ಕರ್ನಾಟಕ) ಸೇರಿಸಿ ಕೆಪಿಎಸ್‌ಸಿ ಮೂಲಕ ಅಧಿಸೂಚನೆ ಹೊರಡಿಸಿತ್ತು.‌‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT