ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ಸೇರಿ 14 ಜಿಲ್ಲೆಗಳಲ್ಲಿ ಇನ್ನೆರಡು ದಿನ ಭಾರಿ ಮಳೆ: ಯೆಲ್ಲೊ ಅಲರ್ಟ್‌

Last Updated 8 ನವೆಂಬರ್ 2021, 1:42 IST
ಅಕ್ಷರ ಗಾತ್ರ

ಬೆಂಗಳೂರು: ಅರಬ್ಬಿ ಸಮುದ್ರದ ಪೂರ್ವ ಮಧ್ಯಭಾಗದಲ್ಲಿ ಪ್ರಬಲ ವಾಯುಭಾರ ಕುಸಿತದಿಂದಾಗಿರಾಜ್ಯದ ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ನ.8 ಮತ್ತು 9ರಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಆಂಧ್ರಪ್ರದೇಶ ಹಾಗೂ ತಮಿಳುನಾಡು ಕರಾವಳಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿರುವ ಪರಿಣಾಮವೂ ರಾಜ್ಯದಲ್ಲಿ ಮಳೆಯಾಗುವ ಲಕ್ಷಣಗಳು ಇವೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾ‍ಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಇದೇ 9 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ ‘ಯೆಲ್ಲೊ ಅಲರ್ಟ್‌’ ಘೋಷಿಸಲಾಗಿದೆ.

ಕರಾವಳಿ ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಹೆಚ್ಚಾಗಿ ಇರಲಿದ್ದು, ಕೆಲವೆಡೆ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಮಳೆ ತಗ್ಗಿದ್ದು, ಒಣಹವೆ ಮುಂದುವರಿದಿದೆ.

ಮಳೆ–ಎಲ್ಲಿ, ಎಷ್ಟು?: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಭಾನುವಾರ 10 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಸುಳ್ಯ 7, ಪುತ್ತೂರು, ಚಾಮರಾಜನಗರ, ಮಡಿಕೇರಿ 5, ಕಾರ್ಕಳ 3, ಮಂಗಳೂರು, ಸಕಲೇಶಪುರ 2, ಮಂಗಳೂರು, ಕುಂದಾಪುರ, ಕಳಸದಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ. ಬೀದರ್‌ನಲ್ಲಿ 14 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT