ರಾಜ್ಯದಲ್ಲಿ ಮತ್ತೆ ಮಳೆ: 5 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಐದು ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’ ಘೋಷಿಸಿದೆ.
ಕೊಡಗು, ಚಾಮರಾಜನಗರ, ಮಂಡ್ಯ, ರಾಮನಗರ, ಕೋಲಾರ ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ. ಈ ಜಿಲ್ಲೆಗಳ ಅಲ್ಲಲ್ಲಿ ಜೋರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ನಗರ ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಶುಕ್ರವಾರ ದಿನವಿಡೀ ಮೋಡ ಕವಿದ ವಾತಾವರಣವಿದ್ದು, ಸಾಧಾರಣ ಮಳೆ ಸುರಿದಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.