ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆ– ಪ್ರವಾಹ ಹಾನಿ: ವಿಧಾನಸಭೆಯಲ್ಲಿ ಚರ್ಚೆ ಇಂದು

ಕಲಾಪ ಸಲಹಾ ಸಮಿತಿಯಲ್ಲಿ ತೀರ್ಮಾನ * 9 ದಿನಗಳಲ್ಲಿ 15 ಮಸೂದೆ ಮಂಡನೆಗೆ ಸಿದ್ಧತೆ
Last Updated 12 ಸೆಪ್ಟೆಂಬರ್ 2022, 23:30 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಜುಲೈನಿಂದ ಸುರಿದ ಭಾರಿ ಮಳೆ, ಪ್ರವಾಹ, ಭೂಕುಸಿತ ಮತ್ತು ಬೆಂಗಳೂರು ನಗರದಲ್ಲಿ ಉಂಟಾದ ಪ್ರವಾಹದ ಬಗ್ಗೆ ಮಂಗಳವಾರದಿಂದ ಮೂರು ದಿನಗಳ ಕಾಲ ವಿಧಾನಸಭೆಯಲ್ಲಿ ಚರ್ಚೆ ನಡೆಸಲು ಕಲಾಪ ಸಲಹಾ ಸಮಿತಿ ಸಭೆ ತೀರ್ಮಾನಿಸಿದೆ.

ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ, ಜೆಡಿಎಸ್‌ ನಾಯಕ ವೆಂಕಟರಾವ್‌ ನಾಡಗೌಡ, ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಭಾಗವಹಿಸಿದ್ದರು.

ಪರಿಸ್ಥಿತಿ ನಿಭಾಯಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್‌ ಮಂಗಳವಾರ ನಿಯಮ 69 ಅಡಿ ವಿಷಯವನ್ನು ಪ್ರಸ್ತಾಪಿಸಲಿದೆ. ಆದರೆ, ಬೇರೆ ನಿಯಮದಡಿ ಚರ್ಚೆ ನಡೆಸಲು ಸರ್ಕಾರ ಒಪ್ಪಿಗೆ ನೀಡಲಿದೆ ಎಂದು ಮೂಲಗಳು ತಿಳಿಸಿವೆ.

‘ಮಳೆ ಮತ್ತು ಪ್ರವಾಹದಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನೂರಾರು ಜನ ಮೃತಪಟ್ಟಿದ್ದಾರೆ. ಆದ್ಯತೆಯ ಮೇರೆಗೆ ಈ ವಿಷಯವನ್ನು ಚರ್ಚೆಗೆ ತೆಗೆದುಕೊಳ್ಳಬೇಕು’ ಎಂದು ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಇತ್ತೀಚೆಗೆ ನಿಧನರಾದ ಸಚಿವ ಉಮೇಶ ಕತ್ತಿ, ಬ್ರಿಟನ್ ರಾಣಿ ಎಲಿಜಬೆತ್, ಮಾಜಿ ಸಚಿವರಾದ ಎಂ.ರಘುಪತಿ, ಪ್ರಭಾಕರ ರಾಣೆ, ಸಿ.ಯಾದವರಾವ್‌, ಮಾಜಿ ಶಾಸಕರಾದ ಕೆ. ಕೆಂಪೇಗೌಡ, ಜಿ.ವಿ.ಶ್ರೀರಾಮರೆಡ್ಡಿ, ಸಿ.ಎಂ.ದೇಸಾಯಿ, ಎ.ಜಿ.ಕೊಡ್ಗಿ, ಈಶಣ್ಣ ಗುಳಗಣ್ಣನವರ, ಸುಗಮ ಸಂಗೀತ ಗಾಯಕ ಶಿವಮೊಗ್ಗ ಸುಬ್ಬಣ್ಣ ಅವರಿಗೆಉಭಯ ಸದನಗಳಲ್ಲಿ ಶ್ರದ್ಧಾಂಜಲಿ ಸಲ್ಲಿಸಿ, ಕಲಾಪವನ್ನು ಮುಂದೂಡಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT