ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಸ್ತೆಗೆ ಹಾಕಿದ ಡಾಂಬರಿಗಿಂತ ರಾಗಿ ಹಿಟ್ಟೇ ಹೆಚ್ಚು ಸ್ಟ್ರಾಂಗ್: ಕಾಂಗ್ರೆಸ್ ಕಿಡಿ

Last Updated 13 ಸೆಪ್ಟೆಂಬರ್ 2022, 12:12 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಹಲವೆಡೆ ರಸ್ತೆಗಳು ಕೊಚ್ಚಿಕೊಂಡು ಹೋಗಿರುವುದರ ಬಗ್ಗೆ ಬಿಜೆಪಿ ಸರ್ಕಾರವನ್ನು ಕಾಂಗ್ರೆಸ್‌ ತರಾಟೆಗೆ ತೆಗೆದುಕೊಂಡಿದೆ. ಇವರ ಅವಧಿಯಲ್ಲಿ ರಸ್ತೆಗೆ ಹಾಕಿರುವ ಡಾಂಬಾರಿಗಿಂತ ರಾಗಿ ಹಿಟ್ಟೇ ಹೆಚ್ಚು ಸ್ಟ್ರಾಂಗ್ ಇದೆ ಎಂದು ವ್ಯಂಗ್ಯಮಾಡಿದೆ.

ಬಿಜೆಪಿ ಸರ್ಕಾರದ ಅಭಿವೃದ್ಧಿ ವಿಚಾರಗಳನ್ನು ಪ್ರಸ್ತಾಪಿಸಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್‌, ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದೆ.

‘ಬಸವರಾಜ ಮೊಮ್ಮಾಯಿ ಅವರೇ, ನಿಮ್ಮ ಸರ್ಕಾರದ ಶೇ 40ರಷ್ಟು ಕಮಿಷನ್ ಲೂಟಿಗೆ ಇನ್ಯಾವ ಸಾಕ್ಷಿ ಬೇಕು, ಇದೇ ರಸ್ತೆಯ ಮೇಲೆ ಬಂದು ಡಬಲ್ ಇಂಜಿನ್ ಅಭಿವೃದ್ಧಿಯಾಗುತ್ತದೆ ಎಂದು ಭಾಷಣ ಮಾಡಿದ್ದ ಪ್ರಧಾನಿ ಮೋದಿ ಅವರೇ, ಈ ಲೂಟಿ ತನಿಖೆಗೆ ಅರ್ಹವಲ್ಲವೇ’ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

‘ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಾಕಿರುವ ರಸ್ತೆ ಡಾಂಬಾರಿಗಿಂತ ಅಡುಗೆ ಮನೆಯಲ್ಲಿ ರೊಟ್ಟಿಗೆ ಕಲಸುವ ರಾಗಿ ಹಿಟ್ಟೇ ಹೆಚ್ಚು ಸ್ಟ್ರಾಂಗ್’ ಎಂದು ಕಾಂಗ್ರೆಸ್ ಲೇವಡಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT