ಶುಕ್ರವಾರ, ಮಾರ್ಚ್ 31, 2023
22 °C

ಕಲಬುರಗಿ – ಬೀದರ್‌ ಜಿಲ್ಲೆಯ ವಿವಿಧೆಡೆ ಆಲಿಕಲ್ಲು ಸಹಿತ ಜೋರು ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರಗಿ: ಕಲಬುರಗಿ ಮತ್ತು ಬೀದರ್‌ ಜಿಲ್ಲೆಯ ವಿವಿಧೆಡೆ ಶನಿವಾರ ಆಲಿಕಲ್ಲು ಸಹಿತ ಮಳೆಯಾಗಿದೆ.

ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ನರನಾಳ, ನಾಗರಾಳ, ಚಿಮ್ಮನಚೋಡ, ಹಸರಗುಂಡಗಿ, ಗುರಂಪಳ್ಳಿ, ಸಾಲೇಬೀರನಹಳ್ಳಿ, ಮರಪಳ್ಳಿ, ಯಂಪಳ್ಳಿ , ತುಮಕುಂಟಾ, ಕೊಳ್ಳೂರ ಹಾಗೂ ಚಂದ್ರಂಪಳ್ಳಿ ಗ್ರಾಮಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ.  ಆಳಂದ ಮತ್ತು ಸೇಡಂ ತಾಲ್ಲೂಕಿನ ವಿವಿಧೆಡೆ ಮಳೆಯಾಗಿದೆ.

ಶುಕ್ರವಾರ ಮಧ್ಯರಾತ್ರಿ ಕಲಬುರಗಿ ನಗರ ಸೇರಿ ಜಿಲ್ಲೆಯ ವಿವಿಧೆಡೆ ಆಲಿಕಲ್ಲು ಸಹಿತ ಮಳೆಯಾಯಿತು. ಶನಿವಾರ ಮಧ್ಯಾಹ್ನದಿಂದ ಕಲಬುರಗಿಯಲ್ಲಿ ಮೋಡ ಕವಿದ ವಾತಾವರಣವಿದೆ.

ಬೀದರ್ ಜಿಲ್ಲೆಯ ಹುಲಸೂರು, ಬಸವಕಲ್ಯಾಣದಲ್ಲಿ ಮಳೆಯಾಗಿದೆ.

ಯಾದಗಿರಿ ನಗರ ಸೇರಿ ಜಿಲ್ಲೆಯ ಶಹಾಪುರ ತಾಲ್ಲೂಕಿನಲ್ಲಿ ಮಳೆಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು