ಸೋಮವಾರ, ಅಕ್ಟೋಬರ್ 26, 2020
27 °C

ಶಿವಮೊಗ್ಗ, ಕೊಡಗಿನಲ್ಲಿ ಭಾರಿ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಸೋಮವಾರ ಧಾರಾಕಾರ ಮಳೆ ಸುರಿದಿದೆ. ಉಡುಪಿ ಜಿಲ್ಲೆಯಲ್ಲಿ ಮಳೆ ಪ್ರಮಾಣ ತಗ್ಗಿದ್ದು, ಜನಜೀವನ ನಿಧಾನವಾಗಿ ಚೇತರಿಸಿಕೊಳ್ಳುತ್ತಿದೆ. ರಾಜ್ಯದ ಉಳಿದ ಭಾಗದಲ್ಲಿ ಉತ್ತಮ ಮಳೆಯಾಗಿದೆ. 

ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ 26.8 ಸೆಂ.ಮೀ. ಮಳೆ ಸುರಿದಿದೆ. ಶರಾವತಿ ಕೊಳ್ಳದ ಜೋಗದ ಕೆಪಿಸಿ ವಸಾಹತು ಪ್ರದೇಶದಲ್ಲಿರುವ ಪುರಾತನ ವಸತಿಗೃಹಗಳ ಮುಂಭಾಗದಲ್ಲಿ ಗುಡ್ಡ ಕುಸಿದಿದೆ. 

ಭದ್ರಾ ಮತ್ತು ತುಂಗಾ ಜಲಾಶಯಗಳಿಂದ ಅಪಾರ ಪ್ರಮಾಣದ ನೀರನ್ನು ನದಿಗೆ ಹರಿಸಲಾಗುತ್ತಿದೆ. ಇದರಿಂದ ತುಂಗಭದ್ರಾ ನದಿಯಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲ್ಲೂಕಿನ ಕೋಣನತಂಬಿಗಿ-ನಿಟ್ಟೂರು ಕ್ರಾಸ್ ಸಮೀಪದ ತುಂಗಭದ್ರಾ ನದಿ ನೀರಿನಲ್ಲಿ ಇಬ್ಬರು ಯುವಕರು ಎರಡು ಎತ್ತುಗಳೊಂದಿಗೆ ನೀರು ಪಾಲಾಗಿದ್ದಾರೆ. ಹೊಸಪೇಟೆ ಬಳಿಯ ಹಂಪಿ ಸ್ಮಾರಕಗಳು ಜಲಾವೃತಗೊಂಡಿವೆ.

ಕೊಡಗು ಜಿಲ್ಲೆಯಲ್ಲಿ ಮತ್ತೆ ಧಾರಾಕಾರವಾಗಿ ಮಳೆಯಾಗುತ್ತಿರುವುದರಿಂದ ಕಾವೇರಿ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು