ಸೋಮವಾರ, ಅಕ್ಟೋಬರ್ 26, 2020
26 °C

ಭಾರಿ ಮಳೆಗೆ ನಲುಗಿದ ಉಡುಪಿ: ಹಲವೆಡೆ ಭೂಕುಸಿತ, ರಸ್ತೆ ಸಂಚಾರ ಬಂದ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ ಕರಾವಳಿ, ಮಲೆನಾಡು ಹಾಗೂ ಕೊಡಗು ಭಾಗದಲ್ಲಿ ಭಾನುವಾರ ಧಾರಾಕಾರ ಮಳೆ ಆಗಿದೆ. ಭಾರಿಮಳೆಗೆ ಉಡುಪಿ ನಗರ, ಜಿಲ್ಲೆಯ ಕೆಲ ಪ್ರದೇಶಗಳು ನಲುಗಿ ಹೋಗಿವೆ. ಹಲವೆಡೆ ಭೂಕುಸಿತದಿಂದ ರಸ್ತೆ ಸಂಚಾರ ಸ್ಥಗಿತಗೊಂಡಿದೆ.

ಉಡುಪಿ ನಗರ ದ್ವೀಪದಂತಾಗಿದ್ದು,ಹಲವು ಬಡಾವಣೆಗಳು ಭಾಗಶಃ ಮುಳುಗಡೆಯಾಗಿವೆ. ಬ್ರಹ್ಮಾವರ, ಕಾಪುತಾಲ್ಲೂಕುಗಳಲ್ಲೂ ಧಾರಾಕಾರ ಮಳೆಯಾಗಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಯಲ್ಲೂ ಭಾರಿ ಮಳೆ ಸುರಿದಿದೆ. ಕೊಡಗು ಜಿಲ್ಲೆಯ ಭಾಗಮಂಡಲಮತ್ತೆ ಜಲಾವೃತಗೊಂಡಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಜೋರು ಮಳೆ ಆಗುತ್ತಿದೆ. ಉತ್ತರ ಕರ್ನಾಟಕ ಭಾಗದಲ್ಲೂ ಉತ್ತಮ ಮಳೆ ಆಗಿದೆ. 

ಇದನ್ನೂ ಓದಿ... ಕರಾವಳಿ, ಕೊಡಗಿನಲ್ಲಿ ಭಾರಿ ಮಳೆ: 7 ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’ ಮುಂದುವರಿಕೆ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು