ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೊಮ್ಮಾಯಿ ಅವರೇ, ವಿಶೇಷ ಪ್ಯಾಕೇಜ್ ಘೋಷಣೆಗೆ ಕೇಂದ್ರಕ್ಕೆ ಒತ್ತಡ ಹಾಕಿ: ಕಾಂಗ್ರೆಸ್

Last Updated 8 ಸೆಪ್ಟೆಂಬರ್ 2022, 13:36 IST
ಅಕ್ಷರ ಗಾತ್ರ

ಬೆಂಗಳೂರು: ಮಳೆಹಾನಿ ಹಾಗೂ ಬೆಳೆ ಹಾನಿಯಿಂದಾಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿಶೇಷ ಪ್ಯಾಕೇಜ್ ಘೋಷಣೆ ಹಾಗೂ ಪರಿಹಾರಕ್ಕಾಗಿ ಕೇಂದ್ರ ಸರ್ಕಾರ ಮೇಲೆ ಒತ್ತಡ ಹಾಕುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕಾಂಗ್ರೆಸ್ ಆಗ್ರಹಿಸಿದೆ.

ಈ ವಿಚಾರವಾಗಿ ‘ಪ್ರಜಾವಾಣಿ’ ವರದಿಯನ್ನು ಉಲ್ಲೇಖಿಸಿ ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ಕೇಂದ್ರ ತಂಡದ ವರದಿಯಂತೆ ಅತಿವೃಷ್ಟಿಯ ನಷ್ಟ ₹3000 ಕೋಟಿ. ವಾಸ್ತವದಲ್ಲಿ ಈ ಮೊತ್ತ ದೊಡ್ಡದಿದೆ. ಬಸವರಾಜ ಬೊಮ್ಮಾಯಿ ಅವರೇ, ಅಸಲಿ ‘ಜನಸ್ಪಂದನೆ’ ಎಂದರೆ ಸಂತ್ರಸ್ತರಿಗೆ ಪರಿಹಾರ ಒದಗಿಸುವುದಾಗಿದೆ. ವಿಶೇಷ ಪ್ಯಾಕೇಜ್ ಘೋಷಿಸುವುದು, ಪರಿಹಾರಕ್ಕಾಗಿ ಕೇಂದ್ರಕ್ಕೆ ಒತ್ತಡ ಹಾಕುವಂತೆ ಒತ್ತಾಯಿಸಿದೆ.

ದೊಡ್ಡಬಳ್ಳಾಪುರದಲ್ಲಿ ಬಿಜೆಪಿ ಗುರುವಾರ ನಡೆಸಲು ಉದ್ದೇಶಿಸಿದ್ದ ‘ಜನೋತ್ಸವ’ವನ್ನು ಮುಂದೂಡಿದೆ. ಈ ಮೂಲಕ ‘ಜನೋತ್ಸವ’ವನ್ನು ಮೂರನೇ ಬಾರಿಗೆ ಮುಂದೂಡಿದಂತಾಗಿದೆ. ಸೆ.10 ರಂದು ಜನೋತ್ಸವವನ್ನು ‘ಜನಸ್ಪಂದನ’ ಹೆಸರಿನಲ್ಲಿ ನಡೆಸಲು ಬಿಜೆಪಿ ತೀರ್ಮಾನಿಸಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್, ‘ಜನಸ್ಪಂದನೆ’ ಹೆಸರಲ್ಲಿ ಸಮಾವೇಶ ಮಾಡಿದರೆ ಜನರಿಗೆ ಸ್ಪಂದಿಸಿದಂತಾಗದು ಎಂದು ವ್ಯಂಗ್ಯವಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT