ಬೆಂಗಳೂರು: ಮುಂಗಾರು ಚುರುಕಾಗಿರುವುದರಿಂದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಜು.11 ಮತ್ತು 12ರಂದು ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಈ ಜಿಲ್ಲೆಗಳಲ್ಲಿ ‘ರೆಡ್ ಅಲರ್ಟ್’ ಮುಂದುವರಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
‘ಕರಾವಳಿ ಜಿಲ್ಲೆಗಳಲ್ಲಿ ಇದೇ 15ರವರೆಗೆ ಧಾರಾಕಾರ ಮಳೆಯಾಗಲಿದೆ. ಕರಾವಳಿಯಲ್ಲಿ ಗಂಟೆಗೆ ಗರಿಷ್ಠ 65 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದೆ ಹಾಗೂ3.3 ಮೀಟರ್‌ಗಳಷ್ಟು ಎತ್ತರದ ಅಲೆಗಳು ಏಳುವ ಸಾಧ್ಯತೆ ಇರುವುದರಿಂದ ಈ ಸಮಯದಲ್ಲಿ ಮೀನುಗಾರರು ಕಡಲಿಗೆ ಇಳಿಯಬಾರದು’ ಎಂದು ಎಚ್ಚರಿಸಿದೆ.
‘ದಕ್ಷಿಣ ಕರ್ನಾಟಕ, ಉತ್ತರ ಕರ್ನಾಟಕದ 12 ಜಿಲ್ಲೆಗಳಲ್ಲಿ ಜು.13ರವರೆಗೆ ‘ಯೆಲ್ಲೊ ಅಲರ್ಟ್’ ನೀಡಲಾಗಿದೆ’ ಎಂದು ಇಲಾಖೆ ಮಾಹಿತಿ ನೀಡಿದೆ.
ಮಳೆ–ಎಲ್ಲಿ, ಎಷ್ಟು?: ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಭಾಗದಲ್ಲಿ ಶನಿವಾರ 16 ಸೆಂ.ಮೀ ಗರಿಷ್ಠ ಮಳೆಯಾಗಿದೆ.
ಭೂಪಾಲ ತೆಗನೂರ (ಕಲಬುರ್ಗಿ) 13.7, ಕೋಣಿ (ಉಡುಪಿ) 12.6, ಕಲಬುರ್ಗಿ 11, ಊರುಬಗೆ (ಚಿಕ್ಕಮಗಳೂರು) 9.6, ಜಾವಳಿ(ಚಿಕ್ಕಮಗಳೂರು) 9.4, ಅತಿಕಾರಬೆಟ್ಟು (ದಕ್ಷಿಣಕನ್ನಡ) 8.7, ಕುಂದಾಪುರ, ಮಂಗಳೂರು 7, ಮೂಡುಬಿದರೆ, ನರಗುಂದ, ವಿರಾಜಪೇಟೆ 6, ಪುತ್ತೂರು, ಸುಳ್ಯ, ಬೆಳ್ತಂಗಡಿ 5, ಆಳಂದ, ಚಿಕ್ಕೋಡಿ, ಬೇಲೂರು 3, ಕಾರ್ಕಳ, ಶ್ರೀನಿವಾಸಪುರ, ಬೀದರ್, ಬಾಗಲಕೋಟೆ, ಮಡಿಕೇರಿ 2 ಸೆ.ಮೀ ಮಳೆಯಾಗಿದೆ.
ರಾಯಚೂರು, ಕಲಬುರ್ಗಿ ಹಾಗೂ ಹಾಸನದಲ್ಲಿ ತಲಾ 32 ಡಿಗ್ರಿ ಸೆಲ್ಸಿಯಸ್ ಗರಿಷ್ಠ ತಾಪಮಾನ ಹಾಗೂ ಮಡಿಕೇರಿಯಲ್ಲಿ 17 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ದಾಖಲಾಗಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.