ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶರಾವತಿ ಕೊಳ್ಳದಲ್ಲಿ ಸತತ ಸುರಿಯುತ್ತಿರುವ ಮಳೆ; 1,810 ಅಡಿ ತಲುಪಿದ ಜಲಾಶಯ ಮಟ್ಟ

ಶರಾವತಿ ಕೊಳ್ಳದಲ್ಲಿ ಸತತ ಸುರಿಯುತ್ತಿರುವ ಮಳೆ
Last Updated 21 ಸೆಪ್ಟೆಂಬರ್ 2020, 2:43 IST
ಅಕ್ಷರ ಗಾತ್ರ

ಕಾರ್ಗಲ್:ವಾರದಿಂದ ಶರಾವತಿ ಕೊಳ್ಳದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 1,810 ಅಡಿಗೆ ತಲುಪಿದೆ ಎಂದು ಕೆಪಿಸಿ ಮೂಲಗಳು ತಿಳಿಸಿವೆ.

ಸಮುದ್ರ ಮಟ್ಟದಿಂದ 1,819 ಅಡಿ ಗರಿಷ್ಠ ಮಟ್ಟದಲ್ಲಿ ನೀರಿನ ಸಂಗ್ರಹಣೆಯ ಸಾಮರ್ಥ್ಯವನ್ನು ಹೊಂದಿರುವ ಲಿಂಗನಮಕ್ಕಿ ಜಲಾಶಯ ಭರ್ತಿಯಾಗಲು 8 ಅಡಿ ಮಾತ್ರ ಬಾಕಿ ಇದೆ. ಆಗಸ್ಟ್ ತಿಂಗಳಿನಲ್ಲಿ ಮಳೆ ಮುಗಿದೇಹೋಯಿತು, ಅಣೆಕಟ್ಟೆ ಈ ಬಾರಿ ಭರ್ತಿಯಾಗುವುದಿಲ್ಲ ಎಂದು ಅಧಿಕಾರಿಗಳು ನಿರಾಶರಾಗಿದ್ದರು.

ಮಳೆ ಇದೇ ರೀತಿ ಮುಂದುವರಿದರೆ ಜಲಾಶಯದಿಂದ ಹೆಚ್ಚುವರಿ ನೀರನ್ನು ನದಿಪಾತ್ರಕ್ಕೆ ಹರಿಸಿದಲ್ಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಯಡ್ಡಳ್ಳಿ, ಮರಳು ಕೋರೆ, ಗಿಳಾಲಗುಂಡಿ ಭಾಗದಲ್ಲಿ ನೆರೆ ಉಂಟಾಗುವ ಸಾಧ್ಯತೆಯಿದೆ ಎಂದು ಈ ಭಾಗದ ನಿವಾಸಿಗಳು ಆತಂಕ
ವ್ಯಕ್ತಪಡಿಸಿದ್ದಾರೆ.

ಶರಾವತಿ ಕಣಿವೆ ಪ್ರದೇಶದಲ್ಲಿ ಎಲ್ಲಾ ಕಡೆ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿದ್ದು, ಮಳೆ ನೀರು ತಗ್ಗಿನ ಪ್ರದೇಶವಾದ ಜೋಗ ಜಲಪಾತದ ಕಡೆಗೆ ಹರಿಯುತ್ತಿರುವುದರಿಂದ ವಿಶ್ವ ವಿಖ್ಯಾತ ಜೋಗದಲ್ಲಿ ಜಲಧಾರೆ ಮನಮೋಹಕವಾಗಿ ಧುಮ್ಮಿಕ್ಕುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT