ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅರ್ಚಕರ ಸಂಭಾವನೆ ಹೆಚ್ಚಿಸಿ: ಜಾನಕಿರಾಮ್‌

Last Updated 25 ಮಾರ್ಚ್ 2021, 13:07 IST
ಅಕ್ಷರ ಗಾತ್ರ

ಬೆಂಗಳೂರು: ‘ಮುಜರಾಯಿ ಇಲಾಖೆಯ ಅಡಿಯಲ್ಲಿ ರಾಜ್ಯದಲ್ಲಿ ಸುಮಾರು 34 ಸಾವಿರ ‘ಸಿ’ ದರ್ಜೆಯ ದೇವಾಲಯಗಳಿವೆ. ಇವುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅರ್ಚಕರಿಗೆ ಮಾಸಿಕ ಕೇವಲ ₹1,400 ಸಂಭಾವನೆ ನೀಡಲಾಗುತ್ತಿದೆ. ಇದರಿಂದಾಗಿ ಹಳ್ಳಿಗಾಡಿನಲ್ಲಿ ವಾಸಿಸುತ್ತಿರುವ ಅರ್ಚಕರ ಜೀವನ ನಿರ್ವಹಣೆ ಕಷ್ಟವಾಗಿದೆ. ಹೀಗಾಗಿ ಸರ್ಕಾರ ಈ ಮೊತ್ತವನ್ನು ₹5 ಸಾವಿರಕ್ಕೆ ಹೆಚ್ಚಿಸಬೇಕು’ ಎಂದು ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ದೇವಾಲಯಗಳ ಅರ್ಚಕರ ಮತ್ತು ಆಗಮಿಕರ ಸಂಘದ ರಾಜ್ಯಾಧ್ಯಕ್ಷ ಜಾನಕಿರಾಮ್‌ ಒತ್ತಾಯಿಸಿದ್ದಾರೆ.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ‘ಸರ್ಕಾರವು ಪ್ರತಿ ದೇವಾಲಯಕ್ಕೆ ಮಾಸಿಕ ₹4 ಸಾವಿರ ಹಣ ನೀಡುತ್ತದೆ. ಇದರಲ್ಲಿ ಪೂಜಾ ಸಾಮಾಗ್ರಿ ಹಾಗೂ ಇತರ ಖರ್ಚು ಕಳೆದರೆ ಉಳಿಯುವುದು ₹1,400 ಮಾತ್ರ. ಈ ಹಣದಲ್ಲಿ ಕುಟುಂಬದ ನಿರ್ವಹಣೆ ಕಷ್ಟ. ಈ ಸಂಬಂಧ ಮುಖ್ಯಮಂತ್ರಿ ಹಾಗೂ ಮುಜರಾಯಿ ಸಚಿವರನ್ನು ಹಲವು ಬಾರಿ ಭೇಟಿ ಮಾಡಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ’ ಎಂದರು.

‘ಹಿಂದಿನ ಸಾಲಿನಲ್ಲಿ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ್ದಾಗ ಅವರು ಸಂಭಾವನೆ ಹೆಚ್ಚಿಸುವುದಾಗಿ ಭರವಸೆ ನೀಡಿದ್ದರು. ಆದರೆ ಈ ಬಾರಿಯ ಬಜೆಟ್‌ನಲ್ಲಿ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳ ಅರ್ಚಕರನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಮುಖ್ಯಮಂತ್ರಿ ಮೇಲೆ ನಮಗೆ ಭರವಸೆ ಇದೆ. ಅವರು ಈಗಲಾದರೂ ಕೊಟ್ಟ ಮಾತು ಉಳಿಸಿಕೊಳ್ಳಲಿ’ ಎಂದು ಹೇಳಿದರು.

‘ರಾಜ್ಯದಲ್ಲಿರುವ ‘ಸಿ’ ದರ್ಜೆಯ ದೇವಾಲಯಗಳಿಗೂ ವ್ಯವಸ್ಥಾಪನಾ ಸಮಿತಿ ರಚಿಸುವಂತೆ ಆದೇಶಿಸಲಾಗಿದೆ. ವಾರ್ಷಿಕ ₹5 ಲಕ್ಷ ಆದಾಯವಿಲ್ಲದ ದೇವಾಲಯಗಳಿಗೆ ಯಾವುದೇ ಕಾರಣಕ್ಕೂ ಸಮಿತಿ ರಚಿಸಬಾರದು’ ಎಂದು ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT