ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಡಿಎಸ್‌ಗೆ ಕುತ್ತು ತಂದ ಇಬ್ಬರು 'ಶ್ರೀನಿವಾಸರು': ಎಚ್‌ಡಿಕೆ

Last Updated 10 ಜೂನ್ 2022, 10:17 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಬಿಜೆಪಿಯ ಮೂರನೇ ಅಭ್ಯರ್ಥಿ ಗೆಲುವು ಸಾಧಿಸಿದರೆ ಅದಕ್ಕೆ ನೇರವಾಗಿ ಕಾಂಗ್ರೆಸ್ ಪಕ್ಷವೇ ಕಾರಣ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ವಿಧಾನಸಭೆಯ ಮೊಗಸಾಲೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಕೀಳುಮಟ್ಟದ ರಾಜಕೀಯ ಮಾಡುತ್ತಿದ್ದಾರೆ. ಜೆಡಿಎಸ್ ಶಾಸಕರಿಂದ ಅಡ್ಡ ಮತದಾನ ಮಾಡಿಸಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುತ್ತಿದ್ದಾರೆ ಎಂದರು.

ಕೋಲಾರ ಶಾಸಕ ಶ್ರೀನಿವಾಸ ಗೌಡ ಕಾಂಗ್ರೆಸ್ ಅಭ್ಯರ್ಥಿಗೆ ಮತ‌ ನೀಡಿದ್ದಾರೆ. ಇದು ಅಲ್ಲಿನ ಮತದಾರರಿಗೆ ಮಾಡಿದ ಅವಮಾನ ಎಂದರು.

ಗುಬ್ಬಿ ಶಾಸಕ ಶ್ರೀನಿವಾಸ್ ಜೆಡಿಎಸ್ ಅಭ್ಯರ್ಥಿಗೆ ಮತ ಚಲಾಯಿಸುವುದಾಗಿ ಟ್ವೀಟ್ ಮಾಡಿದ್ದರು. ಆದರೆ, ಖಾಲಿ ಮತಪತ್ರ ಹಾಕಿ‌ಹೋಗಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT