ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜ್ಯದಲ್ಲಿ ಈವರೆಗೆ 2,856 ಕಪ್ಪು ಶಿಲೀಂಧ್ರ ಪ್ರಕರಣ ಪತ್ತೆ, 225 ಮಂದಿ ಸಾವು

Last Updated 18 ಜೂನ್ 2021, 15:24 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಇದುವರೆಗೆ 2,856 ಕಪ್ಪು ಶಿಲೀಂಧ್ರ (ಬ್ಲ್ಯಾಕ್‌ ಫಂಗಸ್‌) ಪ್ರಕರಣಗಳು ಪತ್ತೆಯಾಗಿದ್ದು, 225 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಆರೋಗ್ಯ ಇಲಾಖೆ ಹಂಚಿಕೊಂಡಿರುವ ಮಾಹಿತಿ ಪ್ರಕಾರ, ರಾಜ್ಯದಾದ್ಯಂತ ವಿವಿಧ ಆಸ್ಪತ್ರೆಗಳಲ್ಲಿ 2,316 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದುವರೆಗೆ 191 ಮಂದಿ ಗುಣಮುಖರಾಗಿದ್ದಾರೆ. ಬೆಂಗಳೂರಿನಲ್ಲಿ ಗರಿಷ್ಠ 959 ಸೋಂಕಿತರಿದ್ದು, ಅವರಲ್ಲಿ 825 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, 49 ಮಂದಿ ಗುಣಮುಖರಾಗಿದ್ದಾರೆ. 72 ಮಂದಿ ಮೃತಪಟ್ಟಿದ್ದಾರೆ.

ಧಾರವಾಡದಲ್ಲಿ 229, ಕಲಬುರ್ಗಿಯಲ್ಲಿ 168, ಬೆಳಗಾವಿಯಲ್ಲಿ 159, ವಿಜಯಪುರದಲ್ಲಿ 130, ಚಿತ್ರದುರ್ಗದಲ್ಲಿ 126, ಬಳ್ಳಾರಿಯಲ್ಲಿ 110, ಬಾಗಲಕೋಟೆಯಲ್ಲಿ 109, ಮೈಸೂರು ಮತ್ತು ರಾಯಚೂರಿನಲ್ಲಿ ತಲಾ 98 ಪ್ರಕರಣಗಳಿವೆ.

ಕೋವಿಡ್‌ ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ಕಪ್ಪು ಶಿಲೀಂಧ್ರ ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಹೆಚ್ಚಾಗಿವೆ.

ರಾಜ್ಯದಲ್ಲಿ ಇಂದು 5,783 ಹೊಸಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 168 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಸದ್ಯ ರಾಜ್ಯದಲ್ಲಿ 1,37,050 ಸಕ್ರಿಯ ಪ್ರಕರಣಗಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT