ಗುರುವಾರ , ಆಗಸ್ಟ್ 18, 2022
25 °C

Karnataka Covid Update:ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಮುಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಗುರುವಾರ 1,046 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿವೆ ಎಂದು ಕುಟುಂಬ ಹಾಗೂ ಆರೋಗ್ಯ ಕಲ್ಯಾಣ ಇಲಾಖೆಯ ಪ್ರಕಟಣೆ ತಿಳಿಸಿದೆ.

ಈ ಮೂಲಕ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ ಇಳಿಕೆಯಾಗಿದೆ.  ಈ ಪೈಕಿ ಬೆಂಗಳೂರು ನಗರದಲ್ಲಿ ಮಾತ್ರವಾಗಿ 984 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. 

ಇದನ್ನೂ ಓದಿ: 

ರಾಜ್ಯದಲ್ಲಿ ಬುಧವಾರದಂದು ಬೆಂಗಳೂರಿನಲ್ಲಿ 1,109 ಸೇರಿದಂತೆ ಒಟ್ಟು 1,249 ಕೋವಿಡ್ ಪ್ರಕರಣಗಳು ವರದಿಯಾಗಿದ್ದವು. 

ಹಾಗಿದ್ದರೂ ಸಕ್ರಿಯ ಪ್ರಕರಣಗಳಲ್ಲಿ ಏರಿಕೆಯಾಗಿದ್ದು, 5,896ಕ್ಕೆ ತಲುಪಿದೆ. ಬುಧವಾರದಂದು ಸಕ್ರಿಯ ಪ್ರಕರಣಗಳ ಸಂಖ್ಯೆ 5,707 ಆಗಿತ್ತು. 

ಇಂದು ಆಸ್ಪತ್ರೆಯಿಂದ 857 ಮಂದಿ ಬಿಡುಗಡೆ ಹೊಂದಿದ್ದಾರೆ. ಇದರೊಂದಿಗೆ ಈವರೆಗೆ ಒಟ್ಟು 39.23 ಲಕ್ಷ ಮಂದಿ ಚೇತರಿಸಿಕೊಂಡಿದ್ದಾರೆ. 

ರಾಜ್ಯದಲ್ಲಿ ಗುರುವಾರ ಕೊರೊನಾ ಸೋಂಕಿನಿಂದಾಗಿ ಯಾವುದೇ ಸಾವು ವರದಿಯಾಗಿಲ್ಲ. ಇದುವರೆಗೆ ಒಟ್ಟು 40,075 ಮಂದಿ ಮೃತಪಟ್ಟಿದ್ದಾರೆ. 

ದೈನಂದಿನ ಕೋವಿಡ್ ಖಚಿತ ಪ್ರಕರಣಗಳ ಶೇಕಡಾವಾರು ಪ್ರಮಾಣ 4.03ರಷ್ಟಾಗಿದೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು