ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: 1,074 ಹೊಸ ಪ್ರಕರಣ, 4 ಮಂದಿ ಸಾವು

Last Updated 9 ಸೆಪ್ಟೆಂಬರ್ 2021, 13:01 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಗುರುವಾರ 1,074 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 4 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,59,164 ಕ್ಕೆ ಏರಿಕೆಯಾಗಿದೆ. ಆ ಪೈಕಿ 37,462 ಮಂದಿ ಸಾವಿಗೀಡಾಗಿದ್ದಾರೆ.

ಈವರೆಗೆ 29,04,683 ಮಂದಿ ಗುಣಮುಖರಾಗಿದ್ದು, ಸದ್ಯ ರಾಜ್ಯದಲ್ಲಿ 16,992 ಸಕ್ರಿಯ ಪ್ರಕರಣಗಳಿವೆ.

ಇಂದು ಬೆಂಗಳೂರಿನಲ್ಲಿ 343 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 3 ಮಂದಿ ಕೊನೆಯುಸಿರೆಳೆದಿದ್ದಾರೆ. ಉಳಿದಂತೆ ದಕ್ಷಿಣ ಕನ್ನಡ 176, ಹಾಸನ 81, ಚಿಕ್ಕಮಗಳೂರು 68, ಕೊಡಗು 59, ಶಿವಮೊಗ್ಗ ಜಿಲ್ಲೆಯಲ್ಲಿ 39 ಹೊಸ ಪ್ರಕರಣಗಳು ವರದಿಯಾಗಿವೆ.

ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ 0.63 ರಷ್ಟಿದ್ದು, ಮರಣ ಪ್ರಮಾಣ ಶೇ 0.37 ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT