ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Updates: 1,488 ಹೊಸ ಪ್ರಕರಣ, 8 ಮಂದಿ ಸಾವು

Last Updated 18 ಮಾರ್ಚ್ 2021, 19:08 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಸತತ ಮೂರನೇ ದಿನ ಹೊಸ ಪ್ರಕರಣಗಳ ಸಂಖ್ಯೆ ಸಾವಿರದ ಗಡಿ ದಾಟಿದೆ. ಗುರುವಾರ 1,488 ಪ್ರಕರಣಗಳು ದೃಢಪಟ್ಟಿವೆ. ಮೂರುವರೆ ತಿಂಗಳಲ್ಲಿ 24 ಗಂಟೆಗಳ ಅವಧಿಯಲ್ಲಿ ವರದಿಯಾದ ಗರಿಷ್ಠ ಪ್ರಕರಣಗಳು ಇವಾಗಿವೆ. ಈವರೆಗೆ ಸೋಂಕಿತರಾದವರ ಸಂಖ್ಯೆ 9.65 ಲಕ್ಷ ದಾಟಿದೆ.

ಹೊಸ ಪ್ರಕರಣಗಳು ಏರುಗತಿ ಪಡೆದ ಕಾರಣ ಸಕ್ರಿಯ ಪ್ರಕರಣಗಳು ಮತ್ತಷ್ಟು ಹೆಚ್ಚಳವಾಗಿದ್ದು, 11,359 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅವರಲ್ಲಿ 131 ಮಂದಿ ತೀವ್ರ ನಿಗಾ ಘಟಕದಲ್ಲಿ ಇದ್ದಾರೆ. ಕೇವಲ ಮೂರು ದಿನಗಳಲ್ಲಿ 3,898 ಮಂದಿ ಸೋಂಕಿತರಾಗಿರುವುದು ಖಚಿತಪಟ್ಟಿದೆ. ಈ ತಿಂಗಳು 18 ದಿನಗಳಲ್ಲಿ 13,977 ಮಂದಿ ಕೊರೊನಾ ಸೋಂಕಿತರಾಗಿರುವುದು ಪರೀಕ್ಷಾ ವರದಿಯಿಂದ ದೃಢಪಟ್ಟಿದೆ. ಈ ಅವಧಿಯಲ್ಲಿ ಪ್ರತಿನಿತ್ಯ ಸರಾಸರಿ 776 ಪ್ರಕರಣಗಳು ದೃಢಪಟ್ಟಿವೆ.

ಸೋಂಕಿತರಲ್ಲಿ ಬೆಂಗಳೂರಿನಲ್ಲಿ 7 ಮಂದಿ ಹಾಗೂ ಬೀದರ್‌ನಲ್ಲಿ ಒಬ್ಬರು ಮೃತಪಟ್ಟಿದ್ದಾರೆ. ಈವರೆಗೆ ಸಾವಿಗೀಡಾದವರ ಸಂಖ್ಯೆ 12,415ಕ್ಕೆ ತಲುಪಿದೆ. ಕೋವಿಡ್ ಪೀಡಿತರಲ್ಲಿ ಮತ್ತೆ 341 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ ಗುಣಮುಖರಾದವರ ಸಂಖ್ಯೆ 9.41 ಲಕ್ಷ ದಾಟಿದೆ. ಒಂದು ದಿನದ ಅವಧಿಯಲ್ಲಿ 93,370 ಮಂದಿಗೆ ಪರೀಕ್ಷೆ ಮಾಡಲಾಗಿದೆ. ಈವರೆಗೆ ನಡೆಸಲಾದ ಪರೀಕ್ಷೆಗಳ ಸಂಖ್ಯೆ 2.01 ಕೋಟಿ ಗಡಿ ದಾಟಿದೆ. ‌

ಹಾವೇರಿ ಹೊರತುಪಡಿಸಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಹೊಸದಾಗಿ ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಏರುಗತಿ ಪಡೆದುಕೊಂಡಿದೆ. ಹೊಸದಾಗಿ 925 ಪ್ರಕರಣಗಳು ವರದಿಯಾಗಿದ್ದು, ಈವರೆಗೆ ಸೋಂಕಿತರ ಸಂಖ್ಯೆ 4.14 ಲಕ್ಷ ದಾಟಿದೆ. ಮೈಸೂರಿನಲ್ಲಿ ಮತ್ತೆ 49 ಪ್ರಕರಣಗಳು ದೃಢಪಟ್ಟಿವೆ. ಅಲ್ಲಿ ಕೋವಿಡ್ ಪೀಡಿತರಾದವರ ಒಟ್ಟು ಸಂಖ್ಯೆ 54,633ಕ್ಕೆ ತಲುಪಿದೆ. ದಕ್ಷಿಣ ಕನ್ನಡದಲ್ಲಿ 64, ಕಲಬುರ್ಗಿಯಲ್ಲಿ 59, ಬೀದರ್‌ನಲ್ಲಿ 53, ವಿಜಯಪುರದಲ್ಲಿ 46, ತುಮಕೂರಿನಲ್ಲಿ 41 ಪ್ರಕರಣಗಳು ಹೊಸದಾಗಿ ವರದಿ‌ಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT