ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: 16,068 ಹೊಸ ಪ್ರಕರಣ, 364 ಮಂದಿ ಸಾವು

ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಾದ್ಯಂತ ಶುಕ್ರವಾರ 16,068 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 364 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 26,69,514 ಕ್ಕೆ ಏರಿಕೆಯಾಗಿದೆ. ಆ ಪೈಕಿ 30,895 ಮಂದಿ ಸಾವಿಗೀಡಾಗಿದ್ದಾರೆ. ಇದುವರೆಗೆ 23,58,412 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 2,80,186 ಸಕ್ರಿಯ ಪ್ರಕರಣಗಳಿವೆ.

ಇದನ್ನೂ ಓದಿ: ಪ್ರಜಾವಾಣಿ - ಡೆಕ್ಕನ್ ಹೆರಾಲ್ಡ್ ಕೋವಿಡ್-19 ಪರಿಹಾರ ನಿಧಿ

ಇಂದು ಬೆಂಗಳೂರಿನಲ್ಲಿ 3,221 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 206 ಮಂದಿ ಮೃತಪಟ್ಟಿದ್ದಾರೆ. ಉಳಿದಂತೆ ಮೈಸೂರು 1,265, ಹಾಸನ 974, ತುಮಕೂರು 857, ದಕ್ಷಿಣ ಕನ್ನಡ 806, ಬೆಳಗಾವಿ 792, ಚಿತ್ರದುರ್ಗ 702, ದಾವಣಗೆರೆ 620, ಚಿಕ್ಕಮಗಳೂರು ಜಿಲ್ಲೆಯಲ್ಲಿ 595 ಹೊಸ ಪ್ರಕರಣಗಳು ವರದಿಯಾಗಿವೆ.

ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ 10.66 ರಷ್ಟಿದ್ದು, ಮರಣ ಪ್ರಮಾಣ ಶೇ 2.26 ರಷ್ಟಿದೆ.

ರಾಜ್ಯದಲ್ಲಿ ಇದುವರೆಗೆ 3,02,99,885 ಕೊರೊನಾ ಮಾದರಿಗಳನ್ನು ಪರೀಕ್ಷೆ ನಡೆಸಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT