Covid-19 Karnataka Update: 1,806 ಹೊಸ ಪ್ರಕರಣ, 42 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 1,806 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 42 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇದರೊಂದಿಗೆ ಸೋಂಕಿತರ ಸಂಖ್ಯೆ 28,80,370 ಕ್ಕೆ ಏರಿಕೆಯಾಗಿದೆ. ಆ ಪೈಕಿ 36,079 ಮಂದಿ ಮೃತಪಟ್ಟಿದ್ದಾರೆ. ಇದುವರೆಗೆ 28,12,869 ಮಂದಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 31,399 ಸಕ್ರಿಯ ಪ್ರಕರಣಗಳಿವೆ.
ಇಂದು ಬೆಂಗಳೂರು 411, ದಕ್ಷಿಣ ಕನ್ನಡ 225, ಮೈಸೂರು 174, ಹಾಸನ 138, ಶಿವಮೊಗ್ಗ ಜಿಲ್ಲೆಯಲ್ಲಿ 110 ಹೊಸ ಪ್ರಕರಣಗಳು ಪತ್ತೆಯಾಗಿವೆ.
ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ 1.18 ರಷ್ಟಿದ್ದು, ಮರಣ ಪ್ರಮಾಣ ಶೇ 2.32 ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇದನ್ನೂ ಓದಿ... ಪ್ರಧಾನಿ ಮೋದಿ ಭೇಟಿ ಮಾಡಿದ ಯಡಿಯೂರಪ್ಪ: ರಾಜ್ಯದ ಅಭಿವೃದ್ಧಿ ಈಡೇರಿಕೆಯ ಭರವಸೆ
Karnataka reports 1806 fresh #COVID cases, 2748 discharges, and 42 deaths in the past 24 hours.
Active cases: 31,399
Total discharges: 28,12,869
Death toll: 36,079 pic.twitter.com/YZgEFaBWRy— ANI (@ANI) July 16, 2021
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.