ಬೆಂಗಳೂರು: ನಗರದಲ್ಲಿ ಕೋವಿಡ್ ಹೊಸ ಪ್ರಕರಣಗಳ ಜತೆಗೆಆಸ್ಪತ್ರೆದಾಖಲಾತಿಯೂ ಗಣನೀಯ ಇಳಿಕೆಯಾಗಿದೆ. ಕೊರೊನಾ ಸೋಂಕಿತರಲ್ಲಿ ಸದ್ಯ 99 ಮಂದಿ ಮಾತ್ರ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಿಕಿತ್ಸೆಗೆ ಮೀಸಲಿಟ್ಟಿರುವ 2,142 ಹಾಸಿಗೆಗಳಲ್ಲಿ 2,043 ಹಾಸಿಗೆಗಳು ಖಾಲಿ ಉಳಿದಿವೆ. ಕೋವಿಡ್ ಮೂರನೇ ಅಲೆಯಲ್ಲಿ ದಿನವೊಂದಕ್ಕೆ ನಗರದಲ್ಲಿ 30 ಸಾವಿರದ ಗಡಿ ಸಮೀಪಿಸಿದ್ದ ಹೊಸ ಪ್ರಕರಣಗಳ ಸಂಖ್ಯೆ, ಈಗ ಸಾವಿರಕ್ಕಿಂತಲೂ ಕಡಿಮೆ ಆಗಿದೆ. ಇದರಿಂದಾಗಿ ಸಕ್ರಿಯ ಪ್ರಕರಣಗಳ ಸಂಖ್ಯೆ 10 ಸಾವಿರದ ಗಡಿಯ ಆಸುಪಾಸಿನಲ್ಲಿದೆ.ಸೋಂಕಿತರಲ್ಲಿ ಬಹುತೇಕರು ಮನೆ ಆರೈಕೆಗೆ ಒಳಗಾಗಿದ್ದಾರೆ. ಆಸ್ಪತ್ರೆಗಳಲ್ಲಿ ಸೋಂಕಿತರ ಚಿಕಿತ್ಸೆಗೆ ಮೀಸಲಿಟ್ಟ ಹಾಸಿಗೆಗಳಲ್ಲಿ ಶೇ 4.6 ರಷ್ಟು ಮಾತ್ರ ಭರ್ತಿಯಾಗಿವೆ.

ಏಳು ದಿನಗಳಲ್ಲಿ50 ಸೋಂಕಿತರು ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ಕೋವಿಡ್ ಪೀಡಿತರಲ್ಲಿ ಬೌರಿಂಗ್ ಹಾಗೂಎಂ.ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ತಲಾ 21 ಮಂದಿ,ಸೇಂಟ್ ಜಾನ್ಸ್ ವೈದ್ಯಕೀಯ ಕಾಲೇಜಿನಲ್ಲಿ 12 ಮಂದಿ, ಬೆಂಗಳೂರು ಬ್ಯಾಪ್ಟಿಸ್ಟ್ ಆಸ್ಪತ್ರೆಯಲ್ಲಿ ಏಳು ಮಂದಿ, ಜಯನಗರ ಸಾರ್ವಜನಿಕಆಸ್ಪತ್ರೆಹಾಗೂ ಕೆ.ಸಿ. ಜನರಲ್ ಆಸ್ಪತ್ರೆಯಲ್ಲಿ ತಲಾ ಐವರು, ಮಣಿಪಾಲ್ ಆಸ್ಪತ್ರೆಯಲ್ಲಿ ನಾಲ್ವರು ಹಾಗೂ ಯಶವಂತಪುರದ ಕೊಲಂಬಿಯಾ ಏಷ್ಯಾ ಆಸ್ಪತ್ರೆಯಲ್ಲಿ ಮೂವರಿಗೆ ಚಿಕಿತ್ಸೆ ಒದಗಿಸಲಾಗುತ್ತಿದೆ.

ಸಾಮಾನ್ಯ ಹಾಸಿಗೆಯಲ್ಲಿ 21, ತೀವ್ರ ನಿಗಾ ಘಟಕದ (ಐಸಿಯು) ಹಾಸಿಗೆಯಲ್ಲಿ 35, ಎಚ್.ಡಿ.ಯು ಹಾಸಿಗೆಯಲ್ಲಿ 29 ಹಾಗೂ ವೆಂಟಿಲೇಟರ್ ಸಹಿತ ಐಸಿಯು ಹಾಸಿಗೆಯಲ್ಲಿ 14 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.