ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: 24 ಗಂಟೆ: 20 ಸಾವಿರದತ್ತ ಕೋವಿಡ್

Last Updated 18 ಏಪ್ರಿಲ್ 2021, 18:25 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ವೇಗವಾಗಿ ಏರಿಕೆ ಕಾಣಲಾರಂಭಿಸಿದ್ದು, ಭಾನುವಾರ 19,067 ಮಂದಿ ಸೋಂಕಿತರಾಗಿರುವುದು ದೃಢಪಟ್ಟಿದೆ. 23 ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಮೂರಂಕಿ ತಲುಪಿದೆ. ‌

ಸೋಂಕು ದೃಢ ಪ್ರಮಾಣ ಶೇ 13.09ಕ್ಕೆ ಏರಿಕೆಯಾಗಿದೆ. ಈ ತಿಂಗಳು 17 ದಿನಗಳಲ್ಲಿಯೇ 1.64 ಲಕ್ಷ ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ಈವರೆಗೆ ಸೋಂಕಿತರಾದವರ ಸಂಖ್ಯೆ 11.61 ಲಕ್ಷ ದಾಟಿದೆ. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಹೊಸದಾಗಿ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿ 12,793 ಮಂದಿ ಸೋಂಕಿತರಾಗಿರುವುದು ದೃಢಪಟ್ಟಿದೆ. ಮೈಸೂರು (777), ಕಲಬುರ್ಗಿ (671), ತುಮಕೂರು (494), ಬೀದರ್ (469), ಹಾಸನ (348), ಮಂಡ್ಯ (338), ದಕ್ಷಿಣ ಕನ್ನಡ (272), ಧಾರವಾಡ (265) ಜಿಲ್ಲೆಯಲ್ಲಿಯೂ ಅಧಿಕ ಪ್ರಕರಣಗಳು ಪತ್ತೆಯಾಗಿವೆ. ಕೋವಿಡ್ ಪೀಡಿತರಲ್ಲಿ ಬೆಂಗಳೂರಿನಲ್ಲಿ 60 ಮಂದಿ ಸೇರಿದಂತೆ ರಾಜ್ಯದಲ್ಲಿ 81 ಮಂದಿ ಮೃತಪಟ್ಟಿರುವುದು ದೃಢಪಟ್ಟಿದೆ. ಮೈಸೂರು ಮತ್ತು ಧಾರವಾಡದಲ್ಲಿ ತಲಾ ಮೂರು ಮಂದಿ, ಯಾದಗಿರಿ, ವಿಜಯಪುರ, ಉತ್ತರ ಕನ್ನಡ, ಕೊಪ್ಪಳ, ಬಳ್ಳಾರಿ ಜಿಲ್ಲೆಯಲ್ಲಿ ತಲಾ ಇಬ್ಬರು, ಬೆಳಗಾವಿ, ಬೀದರ್, ಚಾಮರಾಜನಗರ, ಮಂಡ್ಯ ಮತ್ತು ತುಮಕೂರಿನಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಇವರಲ್ಲಿ ಬಹುತೇಕರು 60 ವರ್ಷ ಮೇಲ್ಪಟ್ಟವರಾಗಿದ್ದು, ಉಸಿರಾಟದ ಸಮಸ್ಯೆಯನ್ನು ಎದುರಿಸಿದ್ದಾರೆ. ಈವರೆಗೆ ಕೋವಿಡ್‌ಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 13,351ಕ್ಕೆ ತಲುಪಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಕೋವಿಡ್ ವೇಗವಾಗಿ ವ್ಯಾಪಿಸಿಕೊಳ್ಳುತ್ತಿರುವ ಪರಿಣಾಮ ಪರೀಕ್ಷೆಗಳ ಸಂಖ್ಯೆ ಹೆಚ್ಚಿಸಲಾಗಿದೆ. ಒಂದು ದಿನದ ಅವಧಿಯಲ್ಲಿ 1.45 ಲಕ್ಷ ಮಾದರಿಗಳನ್ನು ಪರೀಕ್ಷಿಸಲಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 1.33 ಲಕ್ಷ ದಾಟಿದೆ. ತೀವ್ರ ನಿಗಾ ಘಟಕಕ್ಕೆ (ಐಸಿಯು) ದಾಖಲಾಗುವವರ ಸಂಖ್ಯೆ ಕೂಡ ಹೆಚ್ಚಳವಾಗಿದೆ. ಸದ್ಯ 620 ಮಂದಿ ಐಸಿಯುನಲ್ಲಿದ್ದಾರೆ. ಕೋವಿಡ್ ಪೀಡಿತರಲ್ಲಿ 4,603 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ ಗುಣಮುಖರಾದವರ ಸಂಖ್ಯೆ 10.14 ಲಕ್ಷಕ್ಕೆ ಏರಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT