ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update | 21,390 ಹೊಸ ಪ್ರಕರಣ; ಲಕ್ಷದತ್ತ ಸಕ್ರಿಯ ಪ್ರಕರಣ

Last Updated 13 ಜನವರಿ 2022, 3:47 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಿದ್ದು, ಬುಧವಾರ 21,390 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ ಲಕ್ಷದ ಗಡಿ (93,099) ಸಮೀಪಿಸಿದೆ.

ಏಳೂವರೆ ತಿಂಗಳ ಬಳಿಕ ಹೊಸ ಪ್ರಕರಣಗಳು 20 ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಪತ್ತೆಯಾಗಿವೆ. ಕೋವಿಡ್ ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಳಮಾಡಲಾಗಿದೆ. ಒಂದು ದಿನದ ಅವಧಿಯಲ್ಲಿ 1.95 ಲಕ್ಷ ಮಾದರಿಗಳನ್ನು ಪರೀಕ್ಷಿಸಲಾಗಿದೆ. ಸೋಂಕು ದೃಢ ಪ್ರಮಾಣಶೇ 10.96 ರಷ್ಟು ವರದಿಯಾಗಿದೆ.

ಎಲ್ಲ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣಗಳು ಹೊಸದಾಗಿ ಪತ್ತೆಯಾಗಿದ್ದು, 19 ಜಿಲ್ಲೆಗಳಲ್ಲಿ ಈ ಸಂಖ್ಯೆ ಮೂರಂಕಿಗೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಪ್ರಕರಣಗಳ ಸಂಖ್ಯೆಮತ್ತಷ್ಟು ಹೆಚ್ಚಳವಾಗಿದ್ದು,15,617 ಮಂದಿ ಕೋವಿಡ್ ಪೀಡಿತರಾಗಿದ್ದಾರೆ. ತುಮಕೂರಿನಲ್ಲಿ 594, ಮೈಸೂರಿನಲ್ಲಿ 524, ದಕ್ಷಿಣ ಕನ್ನಡದಲ್ಲಿ 519 ಪ್ರಕರಣಗಳು ವರದಿಯಾಗಿವೆ. ಉಳಿದ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು 500ಕ್ಕಿಂತ ಕಡಿಮೆ ಇವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT