ಶನಿವಾರ, ಜನವರಿ 29, 2022
18 °C

Covid-19 Karnataka Update: 299 ಕೋವಿಡ್‌ ಪ್ರಕರಣ ದೃಢ, 6 ಮಂದಿ ಸಾವು

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿ ಮಂಗಳವಾರ 299 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, 6 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 29,98,699 ಕ್ಕೆ ಏರಿಕೆಯಾಗಿದೆ. ಆ ಪೈಕಿ 38,243 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ.

ಇದುವರೆಗೆ 29,53,327 ಮಂದಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 7,100 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ 0.36 ರಷ್ಟಿದ್ದು, ಮರಣ ಪ್ರಮಾಣ ಶೇ 2.00 ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 215 ಹೊಸ ಪ್ರಕರಣಗಳು ಪತ್ತೆಯಾಗಿದ್ದು, ಮೂವರು ಸೋಂಕಿತರು ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ 14, ಕೊಡಗು 12,  ಮೈಸೂರು ಜಿಲ್ಲೆಯಲ್ಲಿ 11 ಹೊಸ ಪ್ರಕರಣಗಳು ವರದಿಯಾಗಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು