ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 Karnataka Update: 314 ಕೋವಿಡ್ ಪ್ರಕರಣ ದೃಢ, ಇಬ್ಬರು ಸಾವು

Last Updated 10 ಡಿಸೆಂಬರ್ 2021, 14:28 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 314 ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿದ್ದು, ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 29,99,785 ಕ್ಕೆ ಏರಿಕೆಯಾಗಿದೆ. ಆ ಪೈಕಿ 38,255 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ.

ಇದುವರೆಗೆ 29,54,196 ಮಂದಿ ಗುಣಮುಖರಾಗಿದ್ದಾರೆ. ಸದ್ಯ ರಾಜ್ಯದಲ್ಲಿ 7,305 ಸಕ್ರಿಯ ಪ್ರಕರಣಗಳಿವೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ 0.26 ರಷ್ಟಿದ್ದು, ಮರಣ ಪ್ರಮಾಣ ಶೇ 0.63 ರಷ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 179 ಹೊಸ ಪ್ರಕರಣ ಪತ್ತೆಯಾಗಿದ್ದು, ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ 26, ಕೊಡಗು 26, ಚಿಕ್ಕಮಗಳೂರು 19, ಮೈಸೂರು ಜಿಲ್ಲೆಯಲ್ಲಿ ಹೊಸದಾಗಿ 15 ಪ್ರಕರಣಗಳು ಪತ್ತೆಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT