ಗುರುವಾರ , ಜೂನ್ 24, 2021
21 °C

Karnataka Covid-19 Update: ರಾಜ್ಯದಲ್ಲಿಂದು 34,804 ಹೊಸ ಪ್ರಕರಣ, 143 ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬೆಂಗಳೂರು ನಗರದಲ್ಲಿ 20,733 ಸೇರಿದಂತೆ ರಾಜ್ಯದಲ್ಲಿ ಭಾನುವಾರ 34,804 ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗಿದ್ದು, 143 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಇದರೊಂದಿಗೆ ಸೋಂಕಿತರ ಸಂಖ್ಯೆ 13,39,201ಕ್ಕೆ ಏರಿಕೆಯಾಗಿದೆ. ಆ ಪೈಕಿ 14,426 ಮಂದಿ ಸೋಂಕಿತರು ಸಾವಿಗೀಡಾಗಿದ್ದಾರೆ.

ಸೋಂಕು ಕಾಣಿಸಿಕೊಂಡಾಗಿನಿಂದ ಇದುವರೆಗೆ 10,62,594 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ ರಾಜ್ಯದಲ್ಲಿ 2,62,162 ಸಕ್ರಿಯ ಪ್ರಕರಣಗಳಿದ್ದು, 1,492 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ... ಕೋವಿಡ್‌ ಹೆಚ್ಚಳ: ದ್ವಿತೀಯ ಪಿಯು ಪ್ರಾಯೋಗಿಕ ಪರೀಕ್ಷೆ‌ ಮುಂದೂಡಿಕೆ

20 ಸಾವಿರ ದಾಟಿದ ಪ್ರಕರಣ: ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ 20,733 ಹೊಸ ಪ್ರಕರಣಗಳು ವರದಿಯಾಗಿದ್ದು, 77 ಮಂದಿ ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 6.53 ಲಕ್ಷಕ್ಕೆ ತಲುಪಿದೆ. ಸದ್ಯ 1,80,542 ಸಕ್ರಿಯ ಪ್ರಕರಣಗಳಿವೆ.

ಉಳಿದಂತೆ ತುಮಕೂರು 1,153, ಕೊಡಗು 1,077, ಬೆಂಗಳೂರು ಗ್ರಾಮಾಂತರ 864, ಮಂಡ್ಯ 814, ಬಳ್ಳಾರಿ 732, ಕೋಲಾರ 782, ಹಾಸನ 768, ಮೈಸೂರು 700, ಕಲಬುರ್ಗಿ 626, ರಾಯಚೂರು 643, ದಕ್ಷಿಣ ಕನ್ನಡ 564, ಧಾರವಾಡ 546, ವಿಜಯಪುರ 468, ಚಿಕ್ಕಬಳ್ಳಾಪುರ 434, ಶಿವಮೊಗ್ಗ 418, ಬೀದರ್ 406, ಬಾಗಲಕೋಟೆ ಜಿಲ್ಲೆಯಲ್ಲಿ 390 ಪ್ರಕರಣಗಳು ಪತ್ತೆಯಾಗಿವೆ. ರಾಜ್ಯದಲ್ಲಿ ಇಂದು 1,76,614 ಸೇರಿದಂತೆ ಇದುವರೆಗೆ 2,47,22,862 ಜನರಿಗೆ ಕೊರೊನಾ ಮಾದರಿಗಳನ್ನು ಪರೀಕ್ಷೆ ನಡೆಸಲಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಇದನ್ನೂ ಓದಿ... ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್‌ಗೆ ಸೂಚಿಸಿದ್ದೇಕೆ?: ಸರ್ಕಾರದ ಸ್ಪಷ್ಟನೆ ಹೀಗಿದೆ

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು