Covid-19 Karnataka Update: 426 ಹೊಸ ಪ್ರಕರಣ ದೃಢ, 2 ಮಂದಿ ಸಾವು

ಬೆಂಗಳೂರು: ರಾಜ್ಯದಾದ್ಯಂತ 24 ಗಂಟೆಗಳಲ್ಲಿ 426 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 2 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 9,40,596 ಕ್ಕೆ ಏರಿಕೆಯಾಗಿದೆ. ಆ ಪೈಕಿ 12,225 ಮಂದಿ ಸಾವಿಗೀಡಾಗಿದ್ದಾರೆ.
ಚೇತರಿಕೆ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚಿದ್ದು, ಈವರೆಗೆ 9,22,437 ಮಂದಿ ಸೋಂಕಿತರು ಗುಣಮುಖರಾಗಿದ್ದಾರೆ. ಸದ್ಯ 5,915 ಸಕ್ರಿಯ ಪ್ರಕರಣಗಳಿವೆ.
ಇಂದು ಬೆಂಗಳೂರಿನಲ್ಲಿ 231 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 159 ಮಂದಿ ಸೋಂಕಿತರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದಂತೆ ದಕ್ಷಿಣ ಕನ್ನಡ 61, ತುಮಕೂರು 25, ಕಲಬುರ್ಗಿ 18, ದಾವಣಗೆರೆ 12, ಮೈಸೂರು ಜಿಲ್ಲೆಯಲ್ಲಿ 10 ಹೊಸ ಪ್ರಕರಣಗಳು ದಾಖಲಾಗಿವೆ.
Karnataka reports 426 new #COVID19 cases, 433 discharges and 2 deaths today.
Total cases 9,40,596
Total discharges 9,22,437
Death toll 12,225Active cases 5915 pic.twitter.com/w5Y2XVv47M
— ANI (@ANI) February 3, 2021
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.