ಗುರುವಾರ , ಸೆಪ್ಟೆಂಬರ್ 16, 2021
29 °C

Covid-19 Karnataka Update: ರಾಜ್ಯದಲ್ಲಿ 673 ಹೊಸ ಪ್ರಕರಣಗಳು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕರ್ನಾಟಕದಾದ್ಯಂತ 24 ಗಂಟೆಗಳ ಅಂತರದಲ್ಲಿ ಕೋವಿಡ್‌–19 ದೃಢಪಟ್ಟ 673 ಹೊಸ ಪ್ರಕರಣಗಳು ದಾಖಲಾಗಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೋಮವಾರ ಪ್ರಕಟಿಸಿದೆ.

ಇದೇ ಅವಧಿಯಲ್ಲಿ ಕೊರೊನಾ ವೈರಸ್‌ ಸೋಂಕಿನಿಂದ 1,074 ಮಂದಿ ಚೇತರಿಸಿಕೊಂಡಿದ್ದಾರೆ ಹಾಗೂ 13 ಮಂದಿ ಸಾವಿಗೀಡಾಗಿದ್ದಾರೆ. ಈ ಮೂಲಕ ಕೋವಿಡ್‌ ಕಾರಣಗಳಿಂದ ಮೃತಪಟ್ಟವರ ಒಟ್ಟು ಸಂಖ್ಯೆ 37,517ಕ್ಕೆ ಏರಿಕೆಯಾಗಿದೆ. ಒಟ್ಟು 29,62,408 ಕೋವಿಡ್‌ ಪ್ರಕರಣಗಳ ಪೈಕಿ 29,08,622 ಮಂದಿ ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಪ್ರಸ್ತುತ 16,241 ಪ್ರಕರಣಗಳು ಸಕ್ರಿಯವಾಗಿವೆ. ಕೋವಿಡ್‌–19 ದೃಢ ಪ್ರಮಾಣ ಶೇ 0.56 ಮತ್ತು ಕೋವಿಡ್‌ನಿಂದ ಮೃತಪಟ್ಟ ಪ್ರಮಾಣ ಶೇ 1.93ರಷ್ಟಿದೆ.

ಇದನ್ನೂ ಓದಿ– ಉತ್ತರ ಪ್ರದೇಶ ಚುನಾವಣೆ ಕರ್ತವ್ಯ: 2,097 ಸರ್ಕಾರಿ ನೌಕರರು ಕೋವಿಡ್‌ನಿಂದ ಸಾವು

ಬೆಂಗಳೂರಿನಲ್ಲಿ 214 ಹೊಸ ಪ್ರಕರಣಗಳು, ದಕ್ಷಿಣ ಕನ್ನಡದಲ್ಲಿ 115, ಉಡುಪಿಯಲ್ಲಿ 75, ಹಾಸನದಲ್ಲಿ 51 ಹಾಗೂ ಮೈಸೂರಿನಲ್ಲಿ 39 ಹೊಸ ಪ್ರಕರಣಗಳು ವರದಿಯಾಗಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು