ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Karnataka Covid Update: ರಾಜ್ಯದಲ್ಲಿ ಕೋವಿಡ್ ಮತ್ತಷ್ಟು ಹೆಚ್ಚಳ

Last Updated 30 ಡಿಸೆಂಬರ್ 2021, 17:20 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಳವಾಗಿದ್ದು, ಗುರುವಾರ 707 ಮಂದಿ ಕೊರೊನಾ ಸೋಂಕಿತರಾಗಿರುವುದು ದೃಢಪಟ್ಟಿದೆ.

ಮೂರೂವರೆ ತಿಂಗಳಲ್ಲಿ ವರದಿ ಯಾದ ಗರಿಷ್ಠ ಪ್ರಕರಣಗಳು ಇವಾಗಿವೆ.ರಾಜ್ಯದ 29 ಜಿಲ್ಲೆಗಳಿಂದ 142 ಮಂದಿ ಕೋವಿಡ್ ಪೀಡಿತರಾದರೇ, ಬೆಂಗಳೂರಿನಲ್ಲಿ 565 ಮಂದಿ ಸೋಂಕಿತರಾಗಿದ್ದಾರೆ.

ರಾಜ್ಯದ 23 ಜಿಲ್ಲೆಗಳಲ್ಲಿಕೋವಿಡ್ ಪ್ರಕರಣಗಳು ಹೊಸದಾಗಿ ಪತ್ತೆಯಾಗಿವೆ. ಕೋವಿಡ್ ಪರೀಕ್ಷೆಗಳ ಸಂಖ್ಯೆಯೂ ಏರಿಕೆ ಕಂಡಿದ್ದು, ಒಂದು ದಿನದ ಅವಧಿಯಲ್ಲಿ 1.14 ಲಕ್ಷ ಮಾದರಿ ಗಳನ್ನು ಪರೀಕ್ಷೆ ಮಾಡಲಾಗಿದೆ. ಸೋಂಕು ದೃಢ ಪ್ರಮಾಣ ಶೇ 0.61ರಷ್ಟಿದೆ. ಐದು ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳ ಸಂಖ್ಯೆ ಎರಡಂಕಿ, 16 ಜಿಲ್ಲೆಗಳಲ್ಲಿಒಂದಂಕಿಯಲ್ಲಿದೆ. ಬಾಗಲಕೋಟೆ, ಚಿಕ್ಕಬಳ್ಳಾಪುರ ಸೇರಿದಂತೆ 8 ಜಿಲ್ಲೆ ಗಳಲ್ಲಿ ಹೊಸದಾಗಿ ಪ್ರಕರಣಗಳು ವರದಿಯಾಗಿಲ್ಲ.

ಉಡುಪಿಯಲ್ಲಿ 19, ಹಾಸನದಲ್ಲಿ 17, ಮೈಸೂರಿನಲ್ಲಿ 16, ಕೊಡಗಿನಲ್ಲಿ 12 ಹಾಗೂ ದಕ್ಷಿಣ ಕನ್ನಡದಲ್ಲಿ 11 ಪ್ರಕರಣಗಳು ವರದಿಯಾಗಿವೆ. ಉಳಿದ ಜಿಲ್ಲೆಗಳಲ್ಲಿ ಹೊಸ ಪ್ರಕರಣಗಳು 10ಕ್ಕಿಂತ ಕಡಿಮೆ ಇವೆ. ಈವರೆಗೆ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 30.06 ಲಕ್ಷ ದಾಟಿದೆ.

ಸೋಂಕಿತರಲ್ಲಿ 252 ಮಂದಿ ಚೇತರಿಸಿಕೊಂಡಿದ್ದಾರೆ. ಗುಣಮುಖರಾದವರ ಒಟ್ಟು ಸಂಖ್ಯೆ 29.59 ಲಕ್ಷ ದಾಟಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 8 ಸಾವಿರದ ಗಡಿ (8,223) ದಾಟಿದೆ. ಬೆಂಗಳೂರಿನಲ್ಲಿ 6,846 ಸೋಂಕಿತರಿದ್ದಾರೆ. ಹಾವೇರಿ ಹಾಗೂ ಗದಗ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳಿಲ್ಲ. ಬೀದರ್, ಬಾಗಲಕೋಟೆ ಸೇರಿದಂತೆ ಆರು ಜಿಲ್ಲೆಗಳಲ್ಲಿಸಕ್ರಿಯ ಪ್ರಕರಣಗಳ ಸಂಖ್ಯೆ 10ಕ್ಕಿಂತ ಕಡಿಮೆಯಿದೆ.

ಕೋವಿಡ್ಪೀಡಿತರಲ್ಲಿ ಬೆಂಗಳೂರಿನಲ್ಲಿ ಮೂವರು ಮೃತಪಟ್ಟಿದ್ದಾರೆ. ರಾಜ್ಯದಲ್ಲಿ ಮರಣ ಪ್ರಮಾಣ ದರವು ಶೇ 0.42 ರಷ್ಟು ಇದೆ. ಈವರೆಗೆ ಕೋವಿಡ್‌ಗೆ ಸಾವಿಗೀಡಾದವರ ಒಟ್ಟು ಸಂಖ್ಯೆ 38,327ಕ್ಕೆ ಏರಿಕೆಯಾಗಿದೆ.

ಐವರು ನರ್ಸಿಂಗ್ ವಿದ್ಯಾರ್ಥಿನಿಯರಿಗೆ ಸೋಂಕು

ಬಂಗಾರಪೇಟೆ: ಪಟ್ಟಣ ಹೊರವಲಯದ ವಿಷ್ಣು ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿ ನಿಲಯದ ಐವರು ವಿದ್ಯಾರ್ಥಿನಿಯರಿಗೆ ಕೋವಿಡ್ ಸೋಂಕು ತಗುಲಿರುವುದು ದೃಢಪಟ್ಟಿದೆ.

ಕೆಜಿಎಫ್ ತಾಲ್ಲೂಕು ಆಸ್ಪತ್ರೆಯಲ್ಲಿ ನಾಲ್ವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಒಬ್ಬರನ್ನು ವಿದ್ಯಾರ್ಥಿನಿಲಯದಲ್ಲೇ ಕ್ವಾರಂಟೈನ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೋಂಕಿತರು ಪಶ್ಚಿಮ ಬಂಗಾಳದವರಾಗಿದ್ದು, ಡಿ. 18ರಂದು ರೈಲಿನಲ್ಲಿ ಪಟ್ಟಣದ ಕಾಲೇಜಿಗೆ ಬಂದಿದ್ದರು. 21ರ ಬಳಿಕ ಅವರ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ವಿದ್ಯಾರ್ಥಿ ನಿಲಯದಲ್ಲಿ ಒಟ್ಟು 63 ವಿದ್ಯಾರ್ಥಿನಿಯರು ಇದ್ದಾರೆ.

ಬಾಲಕರ ವಿದ್ಯಾರ್ಥಿ ನಿಲಯದ 56 ವಿದ್ಯಾರ್ಥಿಗಳ ಗಂಟಲು ದ್ರವ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಹೊಸ ಪ್ರಕರಣಗಳ ದಿಢೀರ್ ಏರಿಕೆ

ನವದೆಹಲಿ: ಗುರುವಾರ ಬೆಳಿಗ್ಗೆ 8ಕ್ಕೆ ಕೊನೆಗೊಂಡ 24 ಗಂಟೆಗಳಲ್ಲಿ ದೇಶದಲ್ಲಿ 13,154 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

ಇದೇ ಅವಧಿಯಲ್ಲಿ ಕೋವಿಡ್‌ನಿಂದ 268 ಸಾವು ಸಂಭವಿಸಿದೆ, ಸಕ್ರಿಯ ಪ್ರಕರಣಗಳ ಸಂಖ್ಯೆ 82,402ರಷ್ಟಿದೆ. ಇನ್ನು, ಓಮೈಕ್ರಾನ್ ಪ್ರಕರಣಗಳ ಸಂಖ್ಯೆ 961ಕ್ಕೆ ಏರಿದ್ದು, ದೆಹಲಿಯಲ್ಲಿ ಈವರೆಗೆ 263 ಮಹಾರಾಷ್ಟ್ರದಲ್ಲಿ 252 ಪ್ರಕರಣ ದಾಖಲಾಗಿವೆ.ಗುಜರಾತ್‌ನಲ್ಲಿ 97, ರಾಜಸ್ಥಾನದಲ್ಲಿ 69ಕ್ಕೆ ಏರಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT